ನೀರು ಹರಿಸದಿದ್ದರೆ ಆ.11ರಂದು ಐಸಿಸಿ ಕಚೇರಿ ಮುತ್ತಿಗೆ: ರೈತ ಸಂಘ ಎಚ್ಚರಿಕೆ
Farmers' association warns of laying siege to ICC office on August 11 if water is not released
ಲೋಕದರ್ಶನ ವರದಿ
ಕಂಪ್ಲಿ, ಆ.7: ತುಂಗಭದ್ರ ಜಲಾಶಯದಲ್ಲಿ ಸುಮಾರು 70 ಟಿಎಂಸಿ ನೀರು ಸಂಗ್ರಹವಿದ್ದರೂ ರೈತರಿಗೆ ನೀರು ಹರಿಸುತ್ತಿಲ್ಲ. ತಕ್ಷಣ ಎಲ್‌ಎಲ್ಸಿ, ವಿಜಯನಗರ ಕಾಲುವೆ ಹಾಗೂ ನದಿಗೆ ನೀರು ಬಿಡದಿದ್ದರೆ ಆಗಸ್ಟ್ 11ರಂದು ಮುನಿರಾಬಾದ್ನ ನೀರಾವರಿ ಸಲಹಾ ಸಮಿತಿ (ಐಸಿಸಿ) ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಬಿ.ವಿ. ಗೌಡ ಎಚ್ಚರಿಕೆ ನೀಡಿದರು.
ಪಟ್ಟಣದ ಸಾಂಸ್ಕೃತಿಕ ಪಾಠಶಾಲೆಯಲ್ಲಿ ಶುಕ್ರವಾರ ನಡೆದ ರೈತರ ಸಭೆಯಲ್ಲಿ ಮಾತನಾಡಿದ ಅವರು, ಮುಂಗಾರು ಹಂಗಾಮಿನ ಬೆಳೆಗಾಗಿ ರೈತರಿಗೆ ತುರ್ತಾಗಿ ನೀರು ಒದಗಿಸಬೇಕು ಎಂದು ಒತ್ತಾಯಿಸಿದರು. ಸಾಕಷ್ಟು ರೈತರು ಬಿತ್ತನೆ ಮಾಡಿದ್ದು, ನೀರಿನ ಕೊರತೆಯಿಂದ ಬೆಳೆ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಆಗಸ್ಟ್ 7ರೊಳಗೆ ನೀರಾವರಿ ಸಲಹಾ ಸಮಿತಿ ಸಭೆ ಕರೆಯುವಂತೆ ಮನವಿ ಮಾಡಿದ್ದರೂ ಸರ್ಕಾರ ಹಾಗೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ರೈತರ ಹಿತಾಸಕ್ತಿಯನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು.
ಆಗಸ್ಟ್ 11ರಂದು ಕಂಪ್ಲಿಯ ಸಾಂಸ್ಕೃತಿಕ ಪಾಠಶಾಲೆಯಿಂದ ಬೈಕ್ ರ್ಯಾಲಿ ಮೂಲಕ ಮುನಿರಾಬಾದ್ನ ಐಸಿಸಿ ಕಚೇರಿಗೆ ತೆರಳಿ ಪ್ರತಿಭಟನೆ ಹಾಗೂ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು.
ಸಭೆಯಲ್ಲಿ ತಾಲ್ಲೂಕು ಅಧ್ಯಕ್ಷ ವಿ.ವಿ. ರೇಶ್, ನಗರ ಘಟಕದ ಅಧ್ಯಕ್ಷ ತಿಮ್ಮಪ್ಪ ನಾಯಕ, ರೈತ ಮುಖಂಡರಾದ ಇಟಗಿ ಶರಣಗೌಡ, ಕೊಟ್ಟೂರು ರಮೇಶ್, ಕಾಗಿ ಈರಣ್ಣ, ರವಿಚಂದ್ರ, ವೆಂಕಟರಮಣ, ಪ್ರಕಾಶ್, ಶಿವಜಾತ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 