ರೈತರು: ರಸಗೊಬ್ಬರಗಳಿಗೆ ಎಮ್.ಆರ್.ಪಿ ಬೆಲೆಗಿಂತ ಹೆಚ್ಚಿನ ದರವನ್ನು ಪಡೆಯುವತ್ತಿಲ್ಲ
Farmers: They are not getting more than the MRP price for fertilizers
ರೈತರು: ರಸಗೊಬ್ಬರಗಳಿಗೆ ಎಮ್.ಆರ್.ಪಿ ಬೆಲೆಗಿಂತ ಹೆಚ್ಚಿನ ದರವನ್ನು ಪಡೆಯುವತ್ತಿಲ್ಲ
ಕಂಪ್ಲಿ 04 : ತಾಲೂಕಿನಲ್ಲಿ ಎಲ್ಲಾ ರೈತರಿಗೆ ರಸಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ ತಲುಪದಿರುವುದು ಮತ್ತು ಎಮ್.ಆರ್.ಪಿ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ವಿರೋಧಿಸಿ,ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಘಟಕದ ನೇತೃತ್ವದಲ್ಲಿ ಪದಾಧಿಕಾರಿಗಳು ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ತಹಶೀಲ್ದಾರ್ ಮಂಜುನಾಥ ಇವರಿಗೆ ಮನವಿ ಪತ್ರ ಸಲ್ಲಿಸಿದರು.ನಂತರ ತಾಲೂಕಾಧ್ಯಕ್ಷ ವಡ್ರು ವಿರೇಶ ಮಾತನಾಡಿ, ರೈತರಿಗೆ ರಸಗೊಬ್ಬರ ಸಮರ್ಕವಾಗಿ ಪೂರೈಕೆಯಾಗುತ್ತಿಲ್ಲ. ಮತ್ತು ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದು, ಇದರ ನಡುವೆ ಇಲ್ಲಿನ ರಸಗೊಬ್ಬರ ಮಾರಾಟಗಾರರು ಎಂ ಆರ್ಿ ದರಕ್ಕಿಂತ ಅಧಿಕ ದರಲ್ಲಿ ರೈತರಿಗೆ ಗೊಬ್ಬರ ನೀಡುತ್ತಿದ್ದಾರೆ.. ರೈತರ ಮಾತಿಗೆ ಯಾವುದೇ ಕವಡೆ ಕಾಸಿನ ಕಿಮ್ಮತ್ತು ನೀಡತು ಇಲ್ಲ ರೈತರಿಗೆ ರಸಗೊಬ್ಬರ ಬೇಕಾದಲ್ಲಿ ಪಹಣಿ, ಆಧಾರ್‌ಕಾರ್ಡ್ ಮತ್ತು ಸಹಿ ಮಾಡಿದ ಇ-ಸ್ಟ್ಯಾಂಪ್, ಖಾಲಿ ಬಾಂಡ್ ಪೇಪರ್ ನೀಡಬೇಕು. ಹಾಗಿದ್ದಲ್ಲಿ ರಸಗೊಬ್ಬರ ನೀಡಲಾಗುತ್ತದೆ ಎಂದು ರೈತರಿಗೆ ಒತ್ತಡ ಏರುತ್ತಿದ್ದಾರೆ ಕಳೆದ ಒಂದು ವಾರದಿಂದ ಎಮ್ಮಿಗನೂರು ಗ್ರಾಮದಲ್ಲಿ ರಸಗೊಬ್ಬರ ಎಮ್.ಆರ್.ಪಿ ಬೆಲೆಗಿಂತ ಹೆಚ್ಚಿನ ಧರಕ್ಕೆ ಬಿಲ್ ಸಮೇತ ಮಾರಾಟ ಮಾಡಿರುತ್ತಾರೆ. ಈ ವಿಷಯವಾಗಿ ತಾಲೂಕಿನ ಸಹಾಯಕ ಕೃಷಿ ಅಧಿಕಾರಿಗಳಿಗೆ ಆಧಾರ ಸಮೇತ ದೂರು ನೀಡಿದರೂ ನಮ್ಮನ್ನು ವಿತರಕರ ಅಂಗಡಿಗೆ ಬನ್ನಿ ಎಂದು ತಿಳಿಸಿರುತ್ತಾರೆ. ಎಲ್ಲಾ ಸರಿಯಾಗಿದೆ ಎಂದು ಹೇಳಿದ್ದು, ತದನಂತರದಲ್ಲಿ ನಮ್ಮ ಹತ್ತಿರ ಬಂದು ವಿತರಕರ ತಪ್ಪು ಏನು ಇಲ್ಲ ಎಂದು ನಮ್ಮ ಮನವೊಲಿಸಲು ಪ್ರಯತ್ನಿಸಿರುತ್ತಾರೆ. ಕಣ್ಣೀದುರಿಗೆ ಜಲ್ ಮತ್ತು ಚೀಲದ ಮೇಲಿನ ಎಮ್.ಆರ್.ಪಿ ಬೆಲೆ ಇದ್ದರೂ ಸಹ ಅವರು ವಿತರಕರ ಪರವಾಗಿ ಮಾತನಾಡುವುದು ಅನುಮಾನಕ್ಕೆ ಕಾರಣವಾಗಿದೆ. ಆದ್ದರಿಂದ ಅಧಿಕಾರಿಗಳ ರೈತರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಿ.ವಿ.ಗೌಡ. ರೈತ ಮುಖಂಡರಾದ ಕೊಟ್ಟೂರು ರಮೇಶ, ಆದೋನಿ ರಂಗಪ್ಪ, ತಿಮ್ಮಪ್ಪ, ಶ್ರೀಧರ, ಗಾದಿಲಿಂಗಪ್ಪ, ಜಡೆಪ್ಪ, ಧರ್ಮಣ್ಣ, ಶ್ರೀಮಂತಸ್ವಾಮಿ, ಕೆ.ಎಂ.ಅಡಿವೆಯ್ಯಸ್ಚಾಮಿ, ಗುಡಿಸಲಿ ರಾಜಾಸಾಬ್, ಬುರ್ರೆಡ್ಡಿ ಬಸವರಾಜ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 