ಹಾನಿಗೊಳಗಾದ ತೊಗರಿಗೆ ಪರಿಹಾರ ರೈತರ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ
Farmers appeal to the District Collector demanding compensation for damaged trees
ವಿಜಯಪುರ 25 : ಮೆಕ್ಕೇಜೋಳಕ್ಕೆ ಪ್ರತಿ ಕ್ವಿಂಟಲ್‌ಗೆ 3000 ಬೆಂಬಲ ನಿಗದಿಪಡಿಸಿ ಶೀಘ್ರದಲ್ಲಿ ಖರೀದಿ ಕೇಂದ್ರ ಪ್ರಾರಂಭಿಸುವುದು ಹಾಗೂ ಹಾನಿಗೊಳಗಾದ ತೊಗರಿಗೆ ಕೂಡಲೇ ಪರಿಹಾರ ಹಣ ರೈತರ ಖಾತೆಗೆ ಜಮಾ ಮಾಡಬೇಕೆಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಬರೆದ ಪತ್ರವನ್ನು ಮಂಗಳವಾರದಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ವಿಜಯಪುರ ಜಿಲ್ಲೆ ಮೊದಲಿನಿಂದಲೂ ಬರಗಾಲ ಜಿಲ್ಲೆ ಎಂಬ ಕೆಟ್ಟ ಹಣೆಪಟ್ಟಿ ಕಟ್ಟಿಕೊಂಡಿದೆ. ಜಿಲ್ಲೆಯಲ್ಲಿ ಐದು ನದಿಗಳು ಹರಿದು ಪಂಚನದಿಗಳ ಬೀಡು 2ನೇ ಪಂಜಾಬ ಎಂದು ಕರೆಯಲಾಗುತ್ತಿದೆ. ಇಂತಹ ನಾಡಿನಲ್ಲಿ ರೈತರು ಯಾವುದೇ ಬೆಳೆಗಳನ್ನು ಬೆಳೆದರೂ ಶ್ರಮಕ್ಕೆ ತಕ್ಕ ಬೆಲೆ ಇಲ್ಲದಂತಾಗಿದೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಅಂತೂ ವಿಪರೀತ ಮಳೆಯಿಂದ ಸಂಪೂರ್ಣ ಹಾಳಾಗಿ ಹೋಗಿ ರೈತರ ಬದುಕನ್ನೇ ಮೂರಾ ಬಟ್ಟೆ ಮಾಡಿದೆ. ಸರ್ಕಾರ ಇನ್ನು ಬಿಡಿಗಾಸು ಪರಿಹಾರ ಹಣ ರೈತರ ಕೈಗೆ ಸೇರಿಲ್ಲ. ಜಿಲ್ಲಾಧಿಕಾರಿಗಳನ್ನು ಕೇಳಿದರೆ ಈಗಾಗಲೇ ವಿಜಯಪುರ ಜಿಲ್ಲೆಗೆ 333 ಕೋಟಿ ತೊಗರಿ ಬೆಳೆ ಹಾನಿ ಪರಿಹಾರ ಜಮೆಯಾಗಿದೆ ಎಂದು ಹೇಳಿದ್ದಾರೆ. ಅದರಲ್ಲಿ ಈಗಾಗಲೇ ನೂರು ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆದರೂ ಜಿಲ್ಲೆಯ ಯಾವೊಬ್ಬ ರೈತನ ಖಾತೆಗೆ ನಯಾ ಪೈಸೆ ಪರಿಹಾರ ಹಣ ಜಮೆಯಾಗಿರುವುದಿಲ್ಲ. ಹಿಂಗಾರು ಬಿತ್ತನೆಗೆ ಖಾಸಗಿ ಲೇವಾದೇವಿಗಳಿಂದ ಸಾಲ ಪಡೆದು ಬಿತ್ತನೆ ಮಾಡಿದ್ದಾರೆ. ಅವರ ಕಿರುಕುಳವು ಹೆಚ್ಚಾಗಿದೆ ಇಂತಹದರಲ್ಲಿ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಕೂಡಲೇ ರೈತರಿಗೆ ತಕ್ಷಣ ತೊಗರಿ ಬೆಳೆ ಹಾನಿ ಪರಿಹಾರದ ಹಣವನ್ನು ರೈತರ ಖಾತೆಗಳಿಗೆ ಜಮೆ ಮಾಡಬೇಕು. ಹಾಗೂ ರೈತರ ಬೆಳೆದಂತಹ ಮೆಕ್ಕೇಜೋಳಕ್ಕೂ ಯಾವುದೇ ಕಿಮ್ಮತ್ತು ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ತೊಗರಿ ಬೆಳೆ ಹಾಳಾದ ರೈತರು ಮೆಕ್ಕೇಜೋಳಕ್ಕಾದರೂ ಅಲ್ಪಸ್ವಲ್ಪ ಕೈಗೆ ಹಣ ಬಂದರೆ ವರ್ಷವಿಡಿ ಕುಟುಂಬ ನಿರ್ವಹಣೆ ಮಾಡಲು ಅನುಕೂಲವಾಗುತ್ತದೆ ಎಂಬ ಆಶಾಭಾವನದಲ್ಲಿರುವ ರೈತರಿಗೆ ಅದಕ್ಕೂ ಕೂಡ ಸರ್ಕಾರಗಳು ಬಾಯಿಗೆ ಮಣ್ಣು ಹಾಕುವ ಕೆಲಸ ಮಾಡುತ್ತಿವೆ. ಕೇಂದ್ರ ಸರ್ಕಾರ ಕಾಟಾಚಾರಕ್ಕೆ ಎಂಬಂತೆ ಪ್ರತಿ ಕ್ವಿಂಟಲ್ ಮೆಕ್ಕೇ ಜೋಳಕ್ಕೆ 2400 ರಂತೆ ನಿಗದಿ ಮಾಡಿದೆ. ಆದರೆ ಇನ್ನು ವಿಜಯಪುರ ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿಲ್ಲ.
ಹೊರಗಡೆ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟ್‌ಲ್ ಮೆಕ್ಕೇಜೋಳಕ್ಕೆ 1500 ರಿಂದ 1800 ರುಪಾಯಿ ಖರೀದಿ ನಡಿದಿವೆ. ಎಮ್.ಎಸ್.ಪಿ ಕಿಂತಲೂ ಮಾರುಕಟ್ಟೆಯಲ್ಲಿ ದರ ಕಡಿಮೆ ಇದ್ದರೂ ಕೂಡಾ ರೈತರು ಅನಿವಾರ್ಯವಾಗಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿದೇ ಇದ್ದಕಾರಣ ಮಾರುಕಟ್ಟೆಯಲ್ಲಿ ನಿಗದಿ ಪಡಿಸಿದ ದರಕ್ಕೆ ಮೆಕ್ಕೇಜೋಳ ಮಾರಾಟ ಮಾಡಿ ರೈತರು ಸಪ್ಪೆ ಮುಖ ಮಾಡಿಕೊಂಡು ಮನೆಗೆ ತೆರಳುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ನಾಡಗೌಡ ಬಿರಾದಾರ ಮಾತನಾಡಿ, ಈ ರೀತಿ ಸರ್ಕಾರಗಳು ರೈತರ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ. ಇದೇ ರೀತಿ ರೈತ ವಿಷಯದಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಾ ನಡೆದರೆ ಮತ್ತೆ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆಗಳು ಹೆಚ್ಚಾಗುತ್ತದೆ. ಸರ್ಕಾರ ಕೂಡಲೇ ಎಚ್ಚೆತ್ತು ಕೊಂಡು ಮೆಕ್ಕೇಜೋಳಕ್ಕೆ ಕನಿಷ್ಠ ಪ್ರತಿ ಕ್ವಿಂಟಲ್‌ಗೆ 3000 ನಿಗದಿಪಡಿಸಬೇಕು. ರಾಜ್ಯ ಸರ್ಕಾರ ಪ್ರೋತ್ಸಾಹ ಧನವಾಗಿ 500 ರುಪಾಯಿ ಘೋಷಣೆ ಮಾಡಿ ಪ್ರತಿಯೊಂದು ಪಿ.ಕೆ.ಪಿ.ಎಸ್.ನಲ್ಲಿ ಮೆಕ್ಕೇಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಜಿಲ್ಲೆಯ ರೈತರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆಂದು ನಾಡಗೌಡ ಬಿರಾದಾರ ಎಚ್ಚರಿಸಿದರು.
ಇದೇ ಸಂದರ್ಭದಲ್ಲಿ ಸಂಗನಗೌಡ ಹಿರೇಗೌಡ, ಮಲ್ಲನಗೌಡ ಬಿರಾದಾರ , ಬಸನಗೌಡ ಹಂಜಲಿ, ಶ್ರೀಶೈಲ ಹೂಗಾರ, ಬೀರು ರಾಠೋಡ, ಸತೀಶ ಬಿರಾದಾರ, ಗುರುಸಂಗಪ್ಪಗೌಡ ಬಿರಾದಾರ, ಸೋಮನಗೌಡ ಬಿರಾದಾರ, ಪುಂಡಲೀಕ ಹಂದಿಗನೂರ, ಮುತ್ತಪ್ಪ ದಳವಾಯಿ ಹಜರುದ್ದೀನ ಮುಲ್ಲಾ, ರೇವಣಸಿದ್ಧ ಚವ್ಹಾಣ, ಸಂಗನಗೌಡ ಪಾಟೀಲ, ಖಾಜೇಸಾಬ ವಾಡೇದ, ಆಕಾಶ ಗುಡದಿನ್ನಿ ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 