ರೈತರು ಬೆಳೆದ ಬೆಳೆಗಳಿಗೆ ಸಮರ್ಕ ಬೆಲೆ ಸಿಗುತ್ತಿಲ್ಲ
Farmers are not getting fair prices for the crops they grow.
ಗದಗ:13:ದೇಶದಲ್ಲಿ ರೈತರು ಬೆಳೆದ ಬೆಳೆಗಳಿಗೆ ಸಮರ್ಕ ಬೆಲೆ ಸಿಗುತ್ತಿಲ್ಲ. ಇದರಿಂದ ಅನ್ನದಾತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾನೆ. ಕೇಂದ್ರ ಸರ್ಕಾರ ಕೂಡಲೇ ರೈತರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕು ಅಂತ ಕರ್ನಾಟಕ ರೈತ ಸೇನೆ ರೋಣ ತಾಲೂಕ ಉಪಾಧ್ಯಕ್ಷ ಶಿವಲಿಂಗಪ್ಪ ಬೊಪಳಾಪೂರ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ರೈತರ ಹಿತಾಸಕ್ತಿಗೆ ಮೊದಲ ಆದ್ಯತೆ ಅಂತ ಪ್ರಧಾನಿ ಮೋದಿ ಹೇಳುತ್ತಾರೆ. ಆದರೆ, ಇದು ಶುದ್ದ ಸುಳ್ಳು. ರೈತರಿಗೆ ಮೊದಲ ಆದ್ಯತೆ ನೀಡಿದ್ದರೇ ರೈತರು ದೇಶಾಧ್ಯಂತ ಬೀದಿಗಿಳಿದು ಹೋರಾಟ ಮಾಡುವ ಸ್ಥಿತಿ ಬರುತ್ತಿರಲಿಲ್ಲ ಅಂತ ಕಿಡಿಕಾರಿದರು. ರೈತರ ದಿಕ್ಕು ತಪ್ಪಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದ್ದು, ರೈತರಿಗೆ ಅನುಕೂಲ ಆಗುವ ವಾತಾವರಣ ನಿರ್ಮಿಸಬೇಕು. ಹಾಗೂ ಎಂ.ಎಸ್.ಪಿಯನ್ನು ಕೂಡಲೇ ಜಾರಿಗೆ ತರಬೇಕು. ಇಲ್ಲದಿದ್ದರೇ ದೇಶಾಧ್ಯಂತ ರೈತರು ಮತ್ತಷ್ಟು ಉಗ್ರ ಹೋರಾಟ ಮಾಡುತ್ತಾರೆ. ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ರೈತರ ಪರವಾಗಿ ನಿಲ್ಲಬೇಕು ಅಂತ ಆಗ್ರಹಿಸಿದರು. ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಉತ್ತರ ಕರ್ನಾಟಕದ ಮಂದಿಗೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ. ಇಲ್ಲಿನ ಜನರು ಬುದ್ದಿವಂತರಿದ್ದಾರೆ. ಜೊತೆಗೆ ಕನ್ಹೇರಿ ಶ್ರೀಗಳು ಮೊದಲು ಜಾತಿ, ಧರ್ಮದ ಬಗ್ಗೆ ಮಾತನಾಡುವುದನ್ನು ಕೈಬಿಡಬೇಕು. ಧಾರವಾಡ, ಬಾಗಲಕೋಟೆ, ವಿಜಯಪುರಕ್ಕೆ ನಿರ್ಬಂಧ ಹೇರಿದ್ದು ಸರಿಯಾದ ಕ್ರಮವಾಗಿದೆ ಎಂದರು. ಈ ಸಂದರ್ಭದಲ್ಲಿ ಶಿವಾನಂದ ಸೂರೆಬಾನ, ರಮೇಶ ಛಲವಾದಿ, ಹನುಮಂತ ಹಳ್ಳಳ್ಳಿ, ಶೇಖಸಾಬ್ ಪಿಂಜಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 