ರೈತರಿಂದ ತೋಗರಿ ನೋಂದಣಿ ಪ್ರಕ್ರಿಯೆ ಆರಂಭ
Farmers begin Togari registration process
ಇಂಡಿ 01 : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ (ಈಂಡ) ಗುಣಮಟ್ಟದ ರೈತರಿಂದ ತೊಗರಿ ಖರೀದಿ ನೋಂದಣಿ ಪ್ರಕ್ರಿಯೆಯನ್ನು 01-01-2026 ರಿಂದ ಪ್ರಾರಂಭಿಸಲಾಗಿದೆ ಎಂದು ಇಂಡಿ ಟಿಎಪಿಸಿಎಂಎಸ್ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಆರ್ ಜಿ ಕಾವಿ ಅವರು ಹೇಳಿದ್ದಾರೆ.ಪ್ರಸಕ್ತ 2025ಹಿ26್ಫೂ ಸಾಲಿನ ಮುಂಗಾರು ಹಂಗಾಮಿನ ತೊಗರಿ ಉತ್ಪನ್ನವನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ರಾಜ್ಯ ಸರ್ಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ನೋಂದಣಿ ಪ್ರಕ್ರಿಯೆ ಆರಂಭಿಸಿದೆವೆ.ಪ್ರತಿ ಕ್ವಿಂಟಾಲ್ಗೆ 8,000 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು, ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್ಗಳಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ಮಾಹಿತಿಯ ಆಧಾರದ ಮೇಲೆ ರೈತರಿಂದ ತೊಗರಿ ಖರೀದಿಸಲಾಗುತ್ತದೆ.
ಖರೀದಿ ಕೇಂದ್ರಗಳಲ್ಲಿ ರೈತರು ನೋಂದಣಿ ಮಾಡಿಸುವಾಗ ಆಧಾರ್ ಕಾರ್ಡ, ಪಹಣಿ ಪತ್ರಿಕೆ (ಪಹಣಿಯಲ್ಲಿ 2025-26 ನೇ ಸಾಲಿನಲ್ಲಿ ತೋಗರಿ ಎಂದು ಇರಬೇಕು)ಹಾಗೂ ಆಧಾರ್ ಲಿಂಕ್ ಆಗಿರುವ ರಾಷ್ಟ್ರೀಕೃತ ಬ್ಯಾಂಕಿನ ಪಾಸ್ಬುಕ್ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕು. ಪಿ.ಓ.ಎಸ್ ಯಂತ್ರದ ಮೂಲಕ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯಲ್ಲಿ ಆಧಾರ್ ಬಯೋಮೆಟ್ರಿಕ್ ಪಡೆಯುವುದು ಕಡ್ಡಾಯವಾಗಿದ್ದು, ರೈತರು ಕಡ್ಡಾಯವಾಗಿ ಮೋಬೈಲ್ ತರಬೇಕು ಅದಕ್ಕೆ ಓಟಿಪಿ ಬರುವುದರಿಂದ ರೈತರು ಸಹಕರಿಸಬೇಕೆಂದು ಮನವಿ ಮಾಡಿದರು.ಅದೇ ರೀತಿ, ರೈತರು ತಮ್ಮ ಫ್ರೂಟ್ಸ್ ಐ.ಡಿ ಯೊಂದಿಗೆ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು ಹಾಗೂ ಇಂಡಿ ತಾಲ್ಲೂಕಿನಲ್ಲಿ ಟಿಎಪಿಸಿಎಂಎಸ್ ಇಂಡಿ, ಹಾಗೂ ಸಾಲೂಟಿಗಿ,ಹಿರೇಬೇವನೂರ,ಅಂಜುಟಗಿ,ಮಿರಗಿ ಬತಗುಣಕಿ ಬಳ್ಳೊಳ್ಳಿ, ಇಂಡಿ (ಶ್ರೀ ನಂದಿ ರೈತ ಉತ್ಪಾದಕರ ಸಂಘ) ಬೆನಕನಹಳ್ಳಿ ತಾಂಬಾ ಲಿಂಗದಹಳ್ಳಿ ಪಿಕೆಪಿಎಸ್ ಕೇಂದ್ರಗಳಲ್ಲಿ ಕೂಡಾ ರೈತರಿಂದ ತೋಗರಿ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 