ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ
Farmers protest demanding the opening of a maize purchasing center
ಶಿಗ್ಗಾವಿ 13 : ಮೆಕ್ಕೆಜೋಳಕ್ಕೆ ಬೆಲೆ ನಿಗದಿ ಹಾಗೂ ಸರ್ಕಾರದಿಂದಲೇ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ತಾಲೂಕಿನಲ್ಲಿ ಮೆಕ್ಕೆಜೋಳ ರೈತರ ಪ್ರಮುಖ ಬೆಳೆಯಾಗಿದೆ. ಪ್ರಸಕ್ತ ಮುಂಗಾರಿನ ಸತತ ಮಳೆಯಿಂದ ಮೆಕ್ಕೆಜೋಳ ಬೆಳೆಯ ಇಳುವರಿ ಕುಂಠಿತವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸರಾಸರಿ ಎಕರೆಗೆ 15 ಕ್ವಿಂಟಾಲ್ ಇಳುವರಿ ಕುಂಠಿತವಾಗಿದೆ. ಕಳೆದ ವರ್ಷದ ಮೆಕ್ಕೆಜೋಳದ ಬೆಲೆ 2400 ರೂ ವರೆಗೂ ಮಾರಾಟವಾಗಿತ್ತು, ಆದರೆ ಈ ವರ್ಷ 1500 ರಿಂದ 1800 ಮಾತ್ರ ಬೆಲೆ ಇದೆ. ಇದರಿಂದ ರೈತರು ತಮ್ಮ ಅಲ್ಪ ಬೆಳೆಗೂ ಬೆಲೆ ಇಲ್ಲದಂತಾಗಿ ಆರ್ಥಿಕವಾಗಿ ಪರದಾಡುವಂತಾಗಿದೆ.ರೈತರ ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರ ಮುಂದೆ ಬಂದು ಪ್ರತಿ ತಾಲೂಕಿನಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಿ, ಕೇಂದ್ರ ಸರ್ಕಾರ ನಿಗಧಿ ಪಡಿಸಿದ ಎಮ್ ಎಸ್ ಪಿ ದರ 2400 ರೂಪಾಯಿಗೆ ರಾಜ್ಯ ಸರ್ಕಾರ ಪ್ರೋತ್ಸಾಹ ಧನ 600 ರೂಪಾಯಿಗಳನ್ನು ಸೇರಿಸಿ, ಪ್ರತಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ 3000 ದರದಂತೆ ಖರೀದಿಸಬೇಕು.ಕೂಡಲೇ ಸರಕಾರ ನ. 24 ರ ಒಳಗಾಗಿ ಬೆಲೆ ನಿಗದಿಮಾಡಿ ಖರೀದಿ ಕೇಂದ್ರ ತೆರೆಯದಿದ್ದರೆ, ತಾಲೂಕಿನರುವ ಎಲ್ಲ ಸರ್ಕಾರಿ ಕಚೇರಿಗಳ ಮುಂದೆ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆದು ರೈತರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.ಈ ಸಂದರ್ಭದಲ್ಲಿ ರೈತ ಸಂಘಟನೆಗಳ ಮುಖಂಡರಾದ ಮಂಜುನಾಥ ಕಂಕನವಾಡ, ಮುತ್ತಣ್ಣ ಗುಡಗೇರಿ, ಬಸವರಾಜ ಗೊಬ್ಬಿ, ಫಕ್ಕೀರ್ಪ ಗಾಣಿಗೇರ, ಬಸಲಿಂಗಪ್ಪ ಕುನ್ನೂರ, ಪಂಚಾಯ್ಯಸ್ವಾಮಿ ಹಿರೇಮಠ, ಮಾಲತೇಶ ಬಾರಕೇರ, ಮಂಜುನಾಥ ಹಾವೇರಿ, ನಿಂಗನಗೌಡ ರಾಮನಗೌಡ್ರ, ನಾಗಪ್ಪ ತೋಟದ, ಮುನೀರ್ ಮುಲ್ಲಾ ಸೇರಿದಂತೆ ಇತರರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 