ಗದಗ 14: ಗದಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮೊದಲ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಫೆ.3 ರಿಂದ 6 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಅಗತ್ಯದ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೂಚಿಸಿದರು.
ಗದಗ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಜಿಲ್ಲಾಮಟ್ಟದ ಟಾಸ್ಕ್ ಪೋಸರ್್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ವಿಶೇಷವಾಗಿ ತಾಂಡಾಗಳಲ್ಲಿ ಪಲ್ಸ್ ಪೋಲಿಯೊ ಕುರಿತು ಅರಿವು ಮೂಡಿಸುವ ಕಾರ್ಯವಾಗಬೇಕು. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಜನನಿಬೀಡ ಪ್ರದೇಶಗಳಲ್ಲಿ ಲಸಿಕಾ ಬೂತ್ಗಳನ್ನು ತೆರದು ಮತ್ತು ಸಂಚಾರಿ ವಾಹನಗಳ ಮೂಲಕ ಲಸಿಕೆ ನೀಡಬೇಕು. ಆರೋಗ್ಯ ಇಲಾಖೆಗೆ ಅಗತ್ಯ ವಾಹನಗಳನ್ನು ಒದಗಿಸಲು ಸಾರಿಗೆ ಇಲಾಖೆಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಪೋಲಿಯೊ ಹನಿ ಶೇಖರಣೆ, ಸಂಸ್ಕರಣೆಗಾಗಿ ಸೂಕ್ತ ಕಾರ್ಯಕ್ರಮದ ದಿನಗಳಂದು ನಿರಂತರ ವಿದ್ಯುತ್ ಸರಬರಾಜು ಇರುವಂತೆ ಹೆಸ್ಕಾಂ ಅಧಿಕಾರಿಗಳು ನಿಗಾವಹಿಸಬೇಕು. ಶಿಕ್ಷಣ ಇಲಾಖೆಯು ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಪ್ರತಿನಿತ್ಯದ ಪ್ರಾರ್ಥನೆ ಸಲ್ಲಿಸುವ ಸಮಯದಲ್ಲಿ ಮಕ್ಕಳಿಗೆ ಮಾಹಿತಿ ನೀಡಿದ ಪಾಲಕರಿಗೆ ಪೋಲಿಯೊ ಕಾರ್ಯಕ್ರಮದ ಕುರಿತು ಮಾಹಿತಿ ರವಾನೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಪಲ್ಸ ಪೋಲಿಯೋ ಮೊದಲ ದಿನ ಗ್ರಾಮ ಹಾಗೂ ಜಿಲ್ಲಾಮಟ್ಟದಲ್ಲಿ ಜನಪ್ರತಿನಿಧಿಗಳಿಂದ ಕಾರ್ಯಕ್ರಮ ಉದ್ಘಾಟನೆಗೆ ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಪೋಲೊಯೋ ಲಸಿಕೆಯಿಂದ ವಂಚಿತರಾಗದಂತೆ ಅಗತ್ಯ ಕ್ರಮ ಜರುಗಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿರುಪಾಕ್ಷರೆಡ್ಡಿ ಮಾದಿನೂರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಜಿ.ಎಸ್.ಪಲ್ಲೇದ, ಜಿಲ್ಲಾ ಆರ.ಸಿ.ಎಚ್. ಅಧಿಕಾರಿ ಡಾ. ಎಸ್.ಎಮ್.ಹೊನಕೇರಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರೇಣುಕಾ ಕೊರವನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕ ರಾಮಕೃಷ್ಣ ಪಡಗಣ್ಣವರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಜಿ.ಎಲ್.ಬಾರಾಟಕ್ಕೆ, ಎಲ್ಲ ತಾಲೂಕು ವೈದ್ಯಾಧಿಕಾರಿಗಳು ಜಿಲ್ಲಾ ಮಟ್ಟದ ವಿವಿಧ ಇಲಾಖೆಗ ಅಧಿಕಾರಿಗಳು ಭಾಗವಹಿಸಿದ್ದರು.