ಫೆ. 3 ಇಂದು ಗ್ಯಾರಂಟಿ ಯೋಜನೆಗಳ ಕುರಿತು ಕಾರ್ಯಗಾರ
Feb. 3 Workshop on guarantee schemes today
ಸವದತ್ತಿ 02 : ತಾಲೂಕಿನ ಯಕ್ಕುಂಡಿ, ಬಡ್ಲಿ, ಮಲ್ಲೂರು ಹಾಗೂ ಹೊಸೂರ ಗ್ರಾಮಗಳಲ್ಲಿ ಫೆ. 3 ಇಂದು ತಾಲೂಕಾ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಗ್ಯಾರಂಟಿ ಯೋಜನೆಗಳ ಕುರಿತು ಕಾರ್ಯಗಾರ ಆಯೋಜಿಸಲಾಗಿದ್ದು, ಫಲಾನುಭವಿಗಳಲ್ಲಿ ಸಮಸ್ಯೆಗಳಿದ್ದರೆ ಚರ್ಚಿಸಲು ಅವಕಾಶವಿದೆ. ಸ್ಥಳೀಯ ಮಟ್ಟದಲ್ಲೇ ಸಮಸ್ಯೆಗಳಿದ್ದಲ್ಲಿ ಬಗೆಹರಿಸಿಕೊಳ್ಳಬಹುದಾಗಿದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಸವದತ್ತಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಕುಮಾರ ರಾಠೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮರ್ಕಗೊಳಿಸಲು ಗ್ಯಾರಂಟಿ ಯೋಜನೆಗಳ ಕುರಿತು ಕಾರ್ಯಗಾರ ನಡೆಸಲಾಗುತ್ತಿದ್ದು, ಗ್ಯಾರಂಟಿ ಯೋಜನೆಗಳ ಉದ್ದೇಶ, ಅನುಷ್ಠಾನ ವಿಧಾನ ಹಾಗೂ ಸಾರ್ವಜನಿಕರಿಗೆ ಲಭ್ಯವಾಗುವ ಪ್ರಯೋಜನಗಳ ಕುರಿತು ವಿವರವಾಗಿ ಮಾಹಿತಿ ನೀಡಲಾಗುವುದು. ಗ್ರಾ.ಪಂ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಮಹಿಳಾ ಫಲಾನುಭವಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 