ಫೆ. 7ರಂದು ಧಾರವಾಡ, ಹಾವೇರಿಗೆ ಉಪರಾಷ್ಟ್ರಪತಿಗಳ ಪ್ರವಾಸ
Feb. Vice President's visit to Dharwad, Haveri on 7th
ಫೆ. 7ರಂದು ಧಾರವಾಡ, ಹಾವೇರಿಗೆ ಉಪರಾಷ್ಟ್ರಪತಿಗಳ ಪ್ರವಾಸ
ಧಾರವಾಡ, 05: ಭಾರತದ ಉಪರಾಷ್ಟ್ರಪತಿಗಳಾದ ಜಗದೀಪ ಧನಕರ್ ಅವರು ಫೆಬ್ರವರಿ 7 ರಂದು ಧಾರವಾಡ ಮತ್ತು ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಫೆಬ್ರವರಿ 7 ರಂದು ಹಾವೇರಿ ಜಿಲ್ಲೆಯ ರಾಣಿಬೆನ್ನೂರದಲ್ಲಿ ರಾಜೇಶ್ವರಿ ಮಹಾವಿದ್ಯಾಲಯದಲ್ಲಿ ಆಯೋಜಿಸಿರುವ ಕರ್ನಾಟಕ ವೈಭವದ ಸಾಹಿತ್ಯ ಮತ್ತು ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಉದ್ಘಾಟಿಸಲಿದ್ದಾರೆ.
ಫೆಬ್ರವರಿ 7 ರಂದು ಬೆಳಿಗ್ಗೆ ನವದೆಹಲಿಯಿಂದ ಹೊರಡುವ ಉಪರಾಷ್ಟ್ರಪತಿಗಳು ಬೆಳಿಗ್ಗೆ 10:50 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಾಣಿಬೆನ್ನೂರಗೆ ತೆರಳುತ್ತಾರೆ. ಕಾರ್ಯಕ್ರಮದ ನಂತರ ಅವರು ಮಧ್ಯಾಹ್ನ 1:20 ಗಂಟೆಗೆ ರಾಣಿಬೆನ್ನೂರನಿಂದ ಹೊರಟು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ನಂತರ ಮಧ್ಯಾಹ್ನ 2:10 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ನವದೆಹಲಿಗೆ ಮರುಪ್ರಯಾಣ ಬೆಳಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 