ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕೆಲಸ : ಗುಡಿಮನಿ
Feeding the hungry is a virtuous act: Gudimani
ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕೆಲಸ : ಗುಡಿಮನಿ
ಗದಗ 27: ಸಕಲ ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದೆ. ನಾವೇಷ್ಟೆ ಸಿರಿವಂತರಾದರೂ ಹಸಿದು ಬಂದವರಿಗೆ ಒಂದು ತುತ್ತು ಅನ್ನ ನೀಡದಿದ್ದರೆ ನಾವು ಗಳಿಸಿದ ಸಂಪತ್ತು ಶೂನ್ಯಕ್ಕೆ ಸಮಾನ ಎಂದು ಜಿಲ್ಲಾ ವಾಣಿಜ್ಯೋಧ್ಯಮ ಸಂಸ್ಥೆಯ ನೂತನ ಅಧ್ಯಕ್ಷ ರಾಜು ಗುಡಿಮನಿ ಅವರು ಹೇಳಿದರು. ನಗರದ ಮಹಾತ್ಮಾಗಾಂಧಿ ವೃತ್ತದ ಬಳಿಯ ಹಳೇ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ (5 ರೂ.ಗೆ ಹೊಟ್ಟೆ ತುಂಬಾ ಊಟ ಖ್ಯಾತಿಯ) ಶ್ರೀ ಅನ್ನಪೂರ್ಣೇಶ್ವರಿ ಪ್ರಸಾದ ನಿಲಯದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ, ಜೀವನದಲ್ಲಿ ದುಡ್ಡು ಗಳಿಸುವುದು ಮುಖ್ಯವಲ್ಲ ಗಳಿಸಿದ ಹಣದಲ್ಲಿ ನಾವೇಷ್ಟು ಜನರಿಗೆ ಒಳ್ಳೆಯದನ್ನು ಮಾಡಿದ್ದವೆ ಎನ್ನುವುದು ಮುಖ್ಯವಾಗಿದೆ. ನಗರದಲ್ಲಿ ಹಸಿದವರಿಗೆ ಅನ್ನ ನೀಡುವ ಮೂಲಕ ಪುಣ್ಯದ ಕೆಲಸ ಮಾಡುತ್ತಿರುವ ಶ್ರೀ ಅನ್ನಪೂರ್ಣೇಶ್ವರಿ ಪ್ರಸಾದ ನಿಲಯದ ಕಾರ್ಯ ಶ್ಲಾಘನೀಯವಾಗಿದೆ. ಮುಂದಿನ ದಿನಗಳಲ್ಲಿ ನಾವೇಲ್ಲ ಪದಾಧಿಕಾರಿಗಳು ಕೂಡ ಈ ಕಾರ್ಯಕ್ಕೆ ತನು-ಮನ-ಧನ ಸೇವೆ ಸಲ್ಲಿಸುತ್ತಿವೆ ಎಂದು ಹೇಳಿದರು.
ರಾಷ್ಟ್ರಪತಿ ಪದಕ ಪುರಸ್ಕೃತ ರಾಜೀವಗಾಂಧ ನಗರ ಬಡಾವಣೆಯ ಪಿಎಸ್‌ಐ ಮಾರುತಿ ಜೋಗದಂಡಕರ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ಗದಗ ನಗರದಲ್ಲಿ ಹಸಿದು ಬಂದವರಿಗೆ ಬರಿ 5 ರೂ.ಗಳಲ್ಲಿ ಹೊಟ್ಟೆ ತುಂಬಾ ಊಟ ನೀಡುತ್ತಿರುವುದು ನಿಜವಾಗಿಯೂ ಹೆಮ್ಮೆಯ ವಿಷಯವಾಗಿದೆ. ಈ ಕಾರ್ಯವನ್ನು ನಿರಂತರವಾಗಿ ನಡೆಸುತ್ತ ಬಂದಿರುವ ಆಡಳಿತ ಮಂಡಳಿ ಸೇವೆಗೆ ನಾವೇಲ್ಲರೂ ಕೈಜೋಡಿಸಬೇಕಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯೋಧ್ಯಮ ಸಂಸ್ಥೆಗೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಜಯದೇವ ಮೆಣಸಗಿ, ಪ್ರಕಾಶ ಉಗಲಾಟದ, ಸಹ ಗೌರವ ಕಾರ್ಯದರ್ಶಿಯಾಗಿ ಆಯ್ಕೆಯಾದ ಅಶೋಕ ಸಂಕಣ್ಣವರ ಅವರನ್ನು ಸನ್ಮಾನಿಸಲಾಯಿತು.
ವೇದಿಕೆ ಮೇಲೆ ಅನ್ನಪೂರ್ಣೇಶ್ವರಿ ಪ್ರಸಾದ ನಿಲಯದ ಗೌರವಾಧ್ಯಕ್ಷರಾದ ಎಸ್.ಎಸ್. ಕಳಸಾಪೂರ, ಉಪಾಧ್ಯಕ್ಷರಾದ ಉಮೇಶ ಪೂಜಾರ, ಹಿರಿಯರಾದ ಮರಿಗುದ್ದಿ, ಪತ್ರಿಮಠ, ಸದಸ್ಯರಾದ ರಾಜಣ್ಣ ಮಲ್ಲಾಡದ, ಮುತ್ತು ಜಡಿ, ಸಮಾಜ ಸೇವಕ ಎಚ್.ಬಿ.ಸಿಂಗ್ರಿ, ನಿಲಯದ ಮೇಲ್ವಿಚಾರಕಿ ಶ್ರೀಮತಿ ವಿಶಾಲಾಕ್ಷಿ ಬಡಿಗೇರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಪ್ರಸಾದ ನಿಲಯದ ಖಜಾಂಚಿ ವೆಂಕಟೇಶ ಇಮರಾಪೂರ ಅವರು ಕಾರ್ಯಕ್ರಮ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 