ಕೊಪ್ಪಳ 03: ಬಾಲ್ಯ ವಿವಾಹ ಹಾಗೂ ಬಾಲ ಕಾಮರ್ಿಕತೆಯ ದುಷ್ಪರಿಣಾಮಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಕುರಿತು ಜಾಗೃತಿಗಾಗಿ ನಿಮರ್ಿಸಿದ "ಸಂದಿಗ್ಧ" ಎಂಬ ಚಲನಚಿತ್ರವನ್ನು ಜ. 16 ರಿಂದ ಜಿಲ್ಲೆಯಲ್ಲಿರುವ ಪ್ರಾಢ ಶಾಲಾ ಹಾಗೂ ಕಾಲೇಜು ವಿದ್ಯಾಥರ್ಿಗಳಿಗಾಗಿ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಹೇಳಿದರು.
ಬಾಲ್ಯ ವಿವಾಹ ಹಾಗೂ ಬಾಲ ಕಾಮರ್ಿಕತೆಯ ದುಷ್ಪರಿಣಾಮಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಬಗ್ಗೆ ಕೊಪ್ಪಳ ಜಿಲ್ಲೆಯಾದ್ಯಂತ "ಸಂದಿಗ್ಧ" ಚಲನಚಿತ್ರ ಪ್ರದಶರ್ಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹ ಹಾಗೂ ಬಾಲ ಕಾಮರ್ಿಕತೆಯ ದುಷ್ಪರಿಣಾಮಗಳ ಬಗ್ಗೆ ವಿದ್ಯಾಥರ್ಿಗಳಲ್ಲಿ ಜಾಗೃತಿ ಅತ್ಯವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು "ಸಂದಿಗ್ಧ" ಎಂಬ ಚಲನಚಿತ್ರವನ್ನು ನಿಮರ್ಿಸಿದೆ. ಕೊಪ್ಪಳ ಜಿಲ್ಲೆಯಲ್ಲಿರುವ ಪ್ರಾಢ ಶಾಲಾ ಹಾಗೂ ಕಾಲೇಜು ವಿದ್ಯಾಥರ್ಿಗಳಿಗೆ ಈ ಚಿತ್ರದ ಪ್ರದರ್ಶನ ಕಾರ್ಯಕ್ರಮವನ್ನು ಜ. 16 ರಿಂದ 30 ರವರೆಗೆ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳ ವಿದ್ಯಾಥರ್ಿಗಳು ಸಂದಿಗ್ಧ ಚಲನಚಿತ್ರ ವೀಕ್ಷಿಸುವಂತೆ ಸಾರ್ವಜನಿಕ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಒಟ್ಟು 22 ಚಿತ್ರ ಮಂದಿರಗಳಲ್ಲಿ ಈ ಚಿತ್ರ ಪ್ರದರ್ಶನ ಮಾಡುವ ವ್ಯವಸ್ಥೆಯನ್ನು ಸಹ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಸೂಚನೆ ನೀಡಿದರು.
ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ. ವನಿತಾ ತೊರವಿ ಅವರು ಮಾತನಾಡಿ, ಜಿಲ್ಲೆಯ 8, 9 ಹಾಗೂ 10ನೇ ತರಗತಿಯ ಮತ್ತು ಪ್ರಥಮ ಪಿಯುಸಿ ವಿದ್ಯಾಥರ್ಿ, ವಿದ್ಯಾಥರ್ಿನಿಯರು ಸಂದಿಗ್ಧ ಚಲನಚಿತ್ರ ವೀಕ್ಷಿಸುವುದು ಮುಖ್ಯವಾಗಿದ್ದು, ಇದರಿಂದ ವಿದ್ಯಾಥರ್ಿಗಳಲ್ಲಿ ಬಾಲ್ಯ ವಿವಾಹ, ಬಾಲ ಕಾಮರ್ಿಕತೆ ವಿರುದ್ಧ ಹೋರಾಡುವ ಧೈರ್ಯ ಮೂಡುತ್ತದೆ. ಚಿತ್ರವು 100 ನಿಮಿಷದ್ದಾಗಿದ್ದು, ವಿದ್ಯಾಥರ್ಿಗಳ ಅನುಕೂಲಕ್ಕಾಗಿ ಚಿತ್ರಮಂದಿರದ ಮೊದಲ ಶೋದಲ್ಲಿಯೇ ಪ್ರದಶರ್ೀಸುವ ವ್ಯವಸ್ಥೆಯಾಗಬೇಕು. ಕೊಪ್ಪಳ ಜಿಲ್ಲೆಯಲ್ಲಿ ಜ. 16 ರಿಂದ 30 ರವರೆಗೆ ಈ ಚಲನಚಿತ್ರ ಪ್ರದರ್ಶನ ನಡೆದು ಜಿಲ್ಲೆಯ ಎಲ್ಲಾ ಮಕ್ಕಳಿಗೆ ಇದರ ಸದುಪಯೋಗವಾಗಬೇಕು. ಅಲ್ಲದೇ ಬಾಲ್ಯ ವಿವಾಹ, ಬಾಲ ಕಾಮರ್ಿಕತೆಯ ದುಷ್ಪರಿಣಾಮಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ಸ್ವಚ್ಛ ಭಾರತ, ಸಕರ್ಾರಿ ಶಾಲೆಗಳ ಉನ್ನತೀಕರಣ ಹಾಗೂ ಶಾಲೆಯಿಂದ ದೂರ ಉಳಿದ ಮಕ್ಕಳಿಗೆ ಮರಳಿ ಶಾಲೆಗೆ ತರುವ ನಿಟ್ಟಿನಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ಮತ್ತು ವೇದಿಕೆ ಕಾರ್ಯಕ್ರಮವನ್ನು ಸಹ ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗುವುದು. ಸಮಾರಂಭದಲ್ಲಿ ಸಕರ್ಾರಿ ಶಾಲೆಗಳ ಉನ್ನತೀಕರಣಕ್ಕೆ ಶ್ರಮೀಸಿದ 10 ಜನರಿಗೆ ಸನ್ಮಾನಿಸಲಾಗುವುದು. ಈ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳು ಸಹಕರಿಸಬೇಕು ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ವೆಂಕಟ್ರಾಜಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿರೇಂದ್ರ ನಾವದಗಿ, ಯುನೆಸ್ಸೆಫ್ ಜಿಲ್ಲಾ ಮಕ್ಕಳ ರಕ್ಷಣ ಯೋಜನೆಯ ಹರೀಶ್ ಜೋಗಿ, ಸೇರಿಂದತೆ ಸಾರ್ವಜನಿಕ ಮತ್ತು ಪದವಿ ಪೂರ್ವ ಶಿಕ್ಷಣ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.