ಅಗ್ನಿಶಾಮಕ ತುರ್ತು ಸೇವೆ ಪ್ರಾತ್ಯಕ್ಷಿಕ ಕಾರ್ಯಕ್ರಮ
Fire Emergency Service Demonstration Program
ಅಗ್ನಿಶಾಮಕ ತುರ್ತು ಸೇವೆ ಪ್ರಾತ್ಯಕ್ಷಿಕ ಕಾರ್ಯಕ್ರಮ
ತಾಳಿಕೋಟಿ 04: ಅಗ್ನಿ ಅನಾಹುತ ಸಂಭವಿಸಿದಾಗ ತಕ್ಷಣದಲ್ಲಿ ಧಾವಿಸುವ ಅಗ್ನಿ ಶಾಮಕದಳ ಸಿಬ್ಬಂದಿಗೆ ಸ್ವಯಂ ರಕ್ಷಣೆಯ ಜೊತೆಗೆ ಬೆಂಕಿಯೊಂದಿಗೆ ಹೋರಾಡಿ ಜನರ ಪ್ರಾಣ ಮತ್ತು ಆಸ್ತಿಯನ್ನು ಉಳಿಸುವ ಜವಾಬ್ದಾರಿ ಇರುತ್ತದೆ ಎಂದು ಅಗ್ನಿಶಾಮಕ ಪ್ರಾಣಧಿಕಾರಿ ಪ್ರಕಾಶ್ ಸುಬ್ಬನಗೋಳ ಹೇಳಿದರು.
ಗುರುವಾರ ಪಟ್ಟಣದ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವಾ ಠಾಣೆ ತಾಳಿಕೋಟೆ ಸಹಯೋಗದಲ್ಲಿ ಹಮ್ಮಿಕೊಂಡ ಅಗ್ನಿ ಶಾಮಕ ಮತ್ತು ತುರ್ತು ಸೇವಾ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಅವರು ಮಾತನಾಡಿದರು. ಅಗ್ನಿ ಅನಾಹುತಗಳು ಸಂಭವಿಸಿದಾಗ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳ ಅರಿವು ಮತ್ತು ಜಾಗೃತಿ ಮೂಡಿಸುವುದು ಪ್ರಮುಖವಾಗಿದೆ. ಅವಘಡಗಳು ಸಂಭವಿಸಿದಾಗ ಎಚ್ಚೆತ್ತುಕೊಳ್ಳುವುದಕ್ಕಿಂತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತದೆ ಎಂದು ಹೇಳಿದರು. ಪ್ರಾಚಾರ್ಯ ಡಾ.ಆರ್. ಎಂ.ಬಂಟನೂರು ಮಾತನಾಡಿ ಅಗ್ನಿ ಅವಘಡ ಹಾಗೂ ಪ್ರವಾಹದಂತಹ ಸಂದರ್ಭದಲ್ಲಿ ಅಗ್ನಿಶಾಮಕ ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ಸಾರ್ವಜನಿಕರನ್ನ ರಕ್ಷಿಸುತ್ತದೆ ಅವರ ಸೇವೆ ಶ್ಲಾಘನೀಯವಾಗಿದೆ ಅವರನ್ನು ಪ್ರತಿಯೊಬ್ಬರು ಗೌರವಿಸಬೇಕಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಅಧಿಕಾರಿ ಮಹಾಂತಪ್ಪ ಬಿರಾದಾರ,ಚಾಲಕ ಜಾಕಿರ್ ನಾಲತ್ತವಾಡ, ಎಸ್.ಸಿ ಕರಕಳಿ, ಎಂ .ಎನ್ ಪಾಟೀಲ, ಶ್ರೀನಿವಾಸ ಚೌವ್ಹಾಣ, ದೇವೇಂದ್ರ ರಾಠೋಡ ಹಾಗೂ ಶಿಕ್ಷಣ ಮಹಾವಿದ್ಯಾಲಯದ ಎಲ್ಲಾ ಉಪನ್ಯಾಸಕರು, ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 