ಮುಧೋಳ ಎಸ್.ಆರ್.ಕಂಠಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿಯವರಿಂದ ಅಗ್ನಿ ಸುರಕ್ಷತೆ ಜಾಗೃತಿ ಮತ್ತು ಪ್ರಾತ್ಯಕ್ಷಿಕೆ
Fire safety awareness and demonstration by Fire Department staff for students of Mudhol S.R.Kanthi
ಬಾಗಲಕೋಟ 10: ಬಿವ್ಹಿವ್ಹಿ ಸಂಘದ ನಗರದ ಶಿಎಸ್.ಆರ್.ಕಂಠಿ ಮಹಾವಿದ್ಯಾಲಯದ ಐಕ್ಯೂಎಸಿ ಹಾಗೂ ಮುಧೋಳ ಅಗ್ನಿಶಾಮಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳಿಗಾಗಿ ಅಗ್ನಿ ಸುರಕ್ಷತೆ ಜಾಗೃತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಧೋಳ ಅಗ್ನಿಶಾಮಕ ಠಾಣಾಧಿಕಾರಿ ಪರಶುರಾಮ ಲಮಾಣಿ ಮುಖ್ಯ ಅತಿಥಿಸ್ಥಾನವಹಿಸಿ ಮಾತನಾಡಿ ಬೆಂಕಿ ಅವಘಡಗಳು ಸಂಭವಿಸಿದಾಗ ಪ್ರಾಣಹಾನಿ ಮತ್ತು ಆಸ್ತಿಹಾನಿ ತಡೆಯಲು ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ. ಸಿಲಿಂಡರ್ ಸೋರಿಕೆ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆದಾಗ ಸಾರ್ವಜನಿಕರು ಗಾಬರಿಯಾಗದೆ ಅಗ್ನಿಶಾಮಕ ಉಪಕರಣಗಳನ್ನು ಬಳಸಿ ಪ್ರಾಥಮಿಕ ಹಂತದಲ್ಲೇ ಬೆಂಕಿ ನಂದಿಸಬೇಕೆಂದು ಹೇಳಿದರು. ಮುಖ್ಯ ಅಗ್ನಿಶಾಮಕ ಸಿಬ್ಬಂದಿ ಎಚ್.ಎಂ.ಕರಿಗೌಡರ ಮತ್ತು ತಂಡದವರು ಬೆಂಕಿ ನಂದಿಸುವ ವಿವಿಧ ತಾಂತ್ರಿಕ ಕೌಶಲಗಳನ್ನು ಪ್ರಾಯೋಗಿಕವಾಗಿ ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಪ್ರದರ್ಶಿಸಿದರು.
ಕಾಲೇಜಿನ ಪ್ರಾಚಾರ್ಯ ಡಾ.ಎಂ.ಆರ್.ಜರಕುಂಟಿ ಅಧ್ಯಕ್ಷತೆವಹಿಸಿ ಮಾತನಾಡಿ ಅಗ್ನಿ ಅವಘಡಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಹೇಗೆ ಕಾರ್ಯನಿರ್ವಹಿಸ ಬಹುದೆಂಬುದರ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿರುವದಕ್ಕೆ ಮಹಾವಿದ್ಯಾಲಯದ ವತಿಯಿಂದ ಅಗ್ನಿಶಾಮಕ ಇಲಾಖೆಯ ಎಲ್ಲ ಸಿಬ್ಬಂದಿ ವರ್ಗಕ್ಕೆ ತಾವು ಅಭಿನಂದಿಸುವದಾಗಿ ತಿಳಿಸಿದರು. ಶ್ರವಣಕುಮಾರ, ಅರ್ಜುನ ಪಡಿಮನಿ, ಸುನೀಲ ಹೊರಟ್ಟಿ ಹಾಗೂ ರೈಫಾ ಜಾಲಿಬೇರ, ಐಕ್ಯೂಎಸಿ ಸಂಯೋಜಕ ಅಜ್ಜಪ್ಪ ಕಡೂರು, ದೈಹಿಕ ನಿರ್ದೇಶಕ ಹಾಗೂ ಎನ್.ಸಿ.ಸಿ ಮುಖ್ಯಸ್ಥ ಲೆಫ್ಟಿನೆಂಟ್ ಅನೀಲಕುಮಾರ ಮುನ್ನೋಳ್ಳಿ, ಭರತ್ ಸ್ಕೌಟ್ ಅಂಡ್ ಗೈಡ್ಸ್‌ನ ಮುಖ್ಯಸ್ಥ ಡಾ.ಎಂ.ಕೆ. ಗವಿಮಠ, ರೆಡ್‌ಕ್ರಾಸ್ ಮುಖ್ಯಸ್ಥ ಪ್ರೊ.ವ್ಹಿ.ಎಂ.ಕಿತ್ತೂರು ಹಾಗೂ ಎನ್‌ಎಸ್‌ಎಸ್ ಅಧಿಕಾರಿ ಪ್ರೊ.ಪಿ.ಡಿ.ಕುಂಬಾರ ಇತರರು ವೇದಿಕೆ ಮೇಲೆ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಅಧಿಕಾರಿ ಡಾ.ಲೋಕೇಶ ರಾಠೋಡ ನಿರೂಪಿಸಿ, ವಂದಿಸಿದರು. ಕಾಲೇಜಿನ ಬೋಧಕ - ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿ ಪಡೆದುಕೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 