ಮಹಿಳಾ ಚೆಸ್ ಪಂದ್ಯಾವಳಿಯಲಿ ಬಿ.ಎಲ್.ಡಿ.ಇ ಸಂಸ್ಥೆಗೆ ಪ್ರಥಮ ಸ್ಥಾನ
First place for BLDE organization in women's chess tournament
ಮಹಿಳಾ ಚೆಸ್ ಪಂದ್ಯಾವಳಿಯಲಿ ಬಿ.ಎಲ್.ಡಿ.ಇ ಸಂಸ್ಥೆಗೆ ಪ್ರಥಮ ಸ್ಥಾನ
ವಿಜಯಪುರ, 05 ; ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಕಾಲೇಜಿನ ಮಹಿಳಾ ತಂಡ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಯೋಜಿಸಿದ್ದ ಕಲಬುರಗಿ ವಲಯ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ರಾಯಚೂರಿನ ನವೋದಯ ಡೆಂಟಲ್ ಕಾಲೇಜಿನಲ್ಲಿ ಆಗಷ್ಟ 1 ಮತ್ತು 2ರಂದು ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ದೀಪ್ತಿ ಮಂಗಲಗಿ, ಗೀತಾಂಜಲಿ ಮುದ್ನೂರ, ಸಾನಿಕಾ ದೇಶಪಾಂಡೆ, ಅನುರಾಧಾ ರೆಡ್ಡಿ ಮತ್ತು ಪೂಜಾ ಬಿರಾಜದಾರ ಅವರನ್ನೊಳಗೊಂಡ ತಂಡ ಪ್ರಥಮ ಸ್ಥಾನ ಪಡೆಯಿತು.
ಮಹಿಳಾ ಚೆಸ್ ತಂಡದ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ, ಸಂಸ್ಥೆಯ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.ಈ ಮಧ್ಯೆ ಇಂದು ಮಂಗಳವಾರ ಕಾಲೇಜಿಗೆ ಆಗಮಿಸಿದ ಚೆಸ್ ತಂಡದ ಸದಸ್ಯರನ್ನು ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಉಪಪ್ರಾಚಾರ್ಯ ಶಶಿಧರ ನಾಯಕ, ಸಹಾಯಕ ಪ್ರಾಧ್ಯಾಪಕ ಅನೀಶ ಮದನಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಈರ್ಪ ಇಕ್ಕಳಕಿ ಸ್ವಾಗತಿಸಿ ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 