ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ: ರಾಜ್ಯಮಟ್ಟಕ್ಕೆ ಆಯ್ಕೆ
First place in folk dance competition: Selected for state level
ಸಿಂದಗಿ 20: ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ವತಿಯಿಂದ ಆಯೋಜಿಸಲಾದ ವಿಜಯಪುರ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸಿಂದಗಿ ಮತಕ್ಷೇತ್ರದ ಬಳಗಾನೂರ ಗ್ರಾಮದ ಬಾಲಕಿಯರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ,
ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಜಾನಪದ ಕವಿ ಆದರ್ಶ ಶಿಕ್ಷಕಿ ಗಿರಿಜಾ ಅಳ್ಳಗಿ ಅವರು ನೀಡಿರುವ ಮಾರ್ಗದರ್ಶನದಲ್ಲಿ ಶಾಲಾ ಮುದ್ದು ಮಕ್ಕಳು ತಮ್ಮ ಸುಂದರ ಕಲಾ ಪ್ರದರ್ಶನ ಮಾಡಿ ಶಾಲೆಯ ಕೀರ್ತಿ ತಂದಿರುವದು ಹೆಮ್ಮೆಯ ವಿಷಯವಾಗಿದೆ ಎಂದು ಹಿರಿಯ ಕವಿ ಶಿಕ್ಷಕ ರಾಚು ಕೊಪ್ಪ ತಿಳಿಸಿದರು.
ವಿದ್ಯಾರ್ಥಿಗಳ ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಆಯ್.ಎಸ್.ಟಕ್ಕೆ ಶಾಲಾ ಮುಖ್ಯೋಪಾಧ್ಯಾಯ ಎಸ್.ಎಚ್.ಬಿರಾದಾರ ಸೇರಿದಂತೆ ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 