ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆಯಲ್ಲಿ ಧಾರವಾಡ ಜಿಲ್ಲೆಯ ಪ್ರಥಮ ಸ್ಥಾನ
First position of Dharwad district in state level quiz competition
ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆಯಲ್ಲಿ ಧಾರವಾಡ ಜಿಲ್ಲೆಯ ಪ್ರಥಮ ಸ್ಥಾನ
ಧಾರವಾಡ 11: ಬೆಂಗಳೂರಿಲ್ಲಿ ನಡೆದ ಅಗಸ್ತ್ಯ ಪ್ರತಿಷ್ಠಾನವು ನೆಡೆಸಿದ ರಾಜ್ಯಮಟ್ಟದ ಟೆಕ್ಸಾಸ್ ಇನ್ಸ್ಟ್ರುಮೆಂಟ್‌ನ ವಿಜ್ಞಾನ ಮತ್ತು ತಂತ್ರಜ್ಞಾನ ಕ್ವಿಜ್ ಸ್ಪರ್ಧೆಯಲ್ಲಿ ಧಾರವಾಡ ಜಿಲ್ಲೆಯ ಪ್ರಥಮ ಸ್ಥಾನ ಗಳಿಸಿದೆ
ಧಾರವಾಡ ಗ್ರಾಮೀಣ ವಲಯದ ಗರಗ ಗ್ರಾಮದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯ 3 ವಿದ್ಯಾರ್ಥಿಗಳ ತಂಡ ಧಾರವಾಡ ಜಿಲ್ಲೆಯನ್ನು ಪ್ರತಿನಿಧಿಸಿತ್ತು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ ..
ವಿದ್ಯಾರ್ಥಿಗಳ ಈ ಸಾಧನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯಾಧಿಕಾರಿ ಹಾಗೂ ಶಾಲೆಯ ಪ್ರಧಾನ ಗುರುಗಳು ಮತ್ತು ಸಿಬ್ಬಂದಿ ಮತ್ತು ಎಸ್ ಡಿ ಎಂ ಸಿ ಸದಸ್ಯರು ಊರಿನ ಗ್ರಾಮಸ್ಥರು ಮಕ್ಕಳ ಈ ಸಾಧನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳಾದ ದೀಪಾ ಪಟದಾರಿ ( 7ನೇ ತರಗತಿ ) ಮತ್ತು ಲಕ್ಷ್ಮೀ ಹಿರೇಮಠ್ (7ನೇ ತರಗತಿ) ಮತ್ತು ಪುಷ್ಪಾ ಅಂಗಡಿ ( 6ನೇ ತರಗತಿ ) ಪ್ರಥಮ ಸ್ಥಾನ ಗಳಿದ್ದಾರೆ. ಈ ವಿದ್ಯಾರ್ಥಿಗಳಿಗೆ ತಲಾ ನಗದು 9,000 ಪ್ರಶಸ್ತಿಯನ್ನು ನೀಡಲಾಗಿದೆ ಮತ್ತು 50,000 ಮೌಲ್ಯದ ವಿಜ್ಞಾನದ ಉಪಕರಣಗಳನ್ನು ಶಾಲೆಗೆ ನೀಡಲಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 