ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಜಾಗೃತಿ ಸಮಿತಿಗೆ ಗೋನಾಳ ಸೇರಿ ಐದು ಸದಸ್ಯರ ನೇಮಕ
Five members, including Gonal, appointed to the District Awareness Committee of the Kannada Develop
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಜಾಗೃತಿ ಸಮಿತಿಗೆ ಗೋನಾಳ ಸೇರಿ ಐದು ಸದಸ್ಯರ ನೇಮಕ
ಕೊಪ್ಪಳ 13 : ಕರ್ನಾಟಕ ಸರ್ಕಾರದ ಅಂಗ ಸಂಸ್ಥೆ ಯಾಗಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕೊಪ್ಪಳ ಜಿಲ್ಲಾ ಜಾಗೃತಿ ಸಮಿತಿಗೆ ಕೊಪ್ಪಳದ ಹಿರಿಯ ಪತ್ರಕರ್ತ ಸಾಹಿತಿ ಹಾಗೂ ಬರಹಗಾರ ಜಿ.ಎಸ್. ಗೋನಾಳ ರವರು ಸೇರಿದಂತೆ ಐದು ಜನ ಸದಸ್ಯರು ನೇಮಕಗೊಂಡಿದ್ದಾರೆ, ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಪದವಿ ವಿದ್ಯಾಲಯದ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗರಾಜ್ ದಂಡೋತಿ, ಹಿರಿಯ ಪತ್ರಕರ್ತ ಸಾಹಿತಿ ಹಾಗೂ ಬರಹಗಾರ ಜಿ.ಎಸ್. ಗೋನಾಳ, ಕೊಪ್ಪಳ ನಗರದ ಮಹೇಶ್ ಬಳ್ಳಾರಿ, ಹಿರಿಯ ಶ್ರೇಣಿ ಕನ್ನಡ ಉಪನ್ಯಾಸಕ ಡಾ, ಸಿದ್ದಲಿಂಗಪ್ಪ ಕೊಟ್ನೆಕಲ್, ಮತ್ತು ಕೊಪ್ಪಳದ ಸಹಾಯಕ ಪ್ರಾಧ್ಯಾಪಕ ಡಾ, ನಿಂಗಪ್ಪ ಕಂಬಳಿ ರವರು ಜಿಲ್ಲಾ ಜಾಗೃತಿ ಸಮಿತಿಗೆ ಸದಸ್ಯರನ್ನಾಗಿ ನೇಮಕಗೊಂಡಿದ್ದಾರೆ, ಸರಕಾರದ ಶಿಫಾರಸ್ಸಿನ ಮೇರೆಗೆ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಆರ್. ರಮೇಶ್ ರವರು ಈ ಐದು ಜನ ಸದಸ್ಯರನ್ನು ಕೊಪ್ಪಳ ಜಿಲ್ಲಾ ಜಾಗೃತಿ ಸಮಿತಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ, ಈ ಎಲ್ಲಾ ಸದಸ್ಯರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕೊಪ್ಪಳ ಜಿಲ್ಲೆಯ ಸದಸ್ಯರಾದ ವಿರುಪ್ಪಣ್ಣ ಕಲ್ಲೂರ್ ರವರ ನೇತೃತ್ವದ ಸಮಿತಿಯಲ್ಲಿ ಸದಸ್ಯರಾಗಿ ಜಿಲ್ಲೆಯಲ್ಲಿ ಕನ್ನಡ ಕಟ್ಟುವ , ಕನ್ನಡ ಬೆಳೆಸುವ ಕೆಲಸ, ಸಾರ್ವಜನಿಕರಲ್ಲಿ ಕನ್ನಡ ಭಾಷೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆ, ಕನ್ನಡ ಜಿಲ್ಲಾ ಜಾಗೃತಿ ಸಮಿತಿಗೆ ನೇಮಕಗೊಂಡಿರುವ ಈ ಎಲ್ಲಾ ಐದು ಜನ ಸದಸ್ಯರಿಗೆ ಜಿಲ್ಲೆಯ ವಿವಿಧ ಕನ್ನಡ ಪರ ಸಂಘಟನೆಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 