ಜಾನಪದ ನೃತ್ಯ, ವಿವಿಧ ಸ್ಪರ್ಧೆಗಳು: ಬಹುಮಾನ ವಿತರಣೆ

Folk Dance, Various Competitions: Distribution of Prizes

ಜಾನಪದ ನೃತ್ಯ, ವಿವಿಧ ಸ್ಪರ್ಧೆಗಳು: ಬಹುಮಾನ ವಿತರಣೆ  

ಕೊಪ್ಪಳ 08: ರಾಜ್ಯ ಬಾಲ ಭವನ ಸೊಸೈಟಿ, ಬೆಂಗಳೂರು ಮತ್ತು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ  ಅಜೀಂ ಪ್ರೇಮ್ ಜಿ ಫೌಂಡೇಶನ್ ಕೊಪ್ಪಳ ಇವರ ಸಹಯೋಗದಲ್ಲಿ ಗುರುವಾರದಂದು ಕೊಪ್ಪಳದ ಬಾಲಕಿಯರ ಸರಕಾರಿ ಮಾಧ್ಯಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಜಾನಪದ ನೃತ್ಯ ಮತ್ತು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಹಾಗೂ ಬಹುಮಾನ ವಿತರಿಸಲಾಯಿತು.  

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರಶುರಾಮ ವಾಯ್‌.  ಶೆಟ್ಟೆಪ್ಪನವರ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಯರಾದ ನಾರಯಣಪ್ಪ ಚಿತ್ರಗಾರ ಅಧ್ಯಕ್ಷತೆ ವಹಿಸಿದ್ದರು.  

ಕಾರ್ಯಕ್ರಮದಲ್ಲಿ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೊಟಗಾರ, ಯಲ್ಲಪ್ಪ ಸೇರಿದಂತೆ ಶಾಲೆಯ ಸಹಶಿಕ್ಷಕರ ವೃಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ವರ್ಗ ಹಾಗೂ ಶಾಲೆಯ ಮಕ್ಕಳು ಉಪಸ್ಥಿತರಿದ್ದರು. ಶೋಭಾ ಅವರು ಕಾರ್ಯಕ್ರಮ ನಿರೂಪಿಸಿದರು.