ಲೋಕದರ್ಶನ ವರದಿ
ಬೆಳಗಾವಿ
17: ಮೈಸೂರಿನಲ್ಲಿ ನಡೆಯುತ್ತಿರುವ ದಸರಾ ಉತ್ಸವದ ನಿಮಿತ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿತು.
ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿ ಹಾಗೂ ಜಾನಪದ ಕಲಾವಿದ ಜ್ಯೋತಿಲರ್ಿಂಗ ಹೊನಕಟ್ಟಿ ಅವರು ಉತ್ತರ ಕನರ್ಾಟಕದ ಜಾನಪದ ಗೀತೆಗಳನ್ನು ಪ್ರಸ್ತುತಪಡಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು. ಈ ನಿಮಿತ್ತ ಸಾಂಸ್ಕೃತಿಕ ಸಮಿತಿ ಪದಾಧಿಕಾರಿಗಳು ಹೊನಕಟ್ಟಿ ಇವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು.
ಹೊನಕಟ್ಟಿ ಅವರು ಪೊಲೀಸ್ ಇಲಾಖೆಯ ಸೇವೆಯೊಂದಿಗೆ ಜಾನಪದ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು ಈಗಾಗಲೇ ಈ ಕುರಿತು ಪುಸ್ತಕ ಹಾಗೂ ಧ್ವನಿಸುರುಳಿ ಬಿಡುಗಡೆಗೊಳಿಸಿದ್ದಾರೆ.