ಜಾನಪದ ಕಲಾ ಮೇಳ ಯಶಸ್ವಿ : ಜನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವಾಳ
Folklore festival a success: Folk arts are the lifeblood of our culture
ಯಮಕನಮರಡಿ 02: ಜನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವಾಳವಾಗಿದ್ದು ಅವುಗಳನ್ನು ಉಳಿಸಲು ಹಾಗೂಮುಂದಿನ ಪೀಳಿಗೆಗೆ ಸಾಗಲು ಜನಪದ ಕಲೆಗಳಿಗೆ ಪ್ರೋತ್ಸಾಹ ನೀಡುವುದು ಅತ್ಯಂತ ಅಗತ್ಯ, ಇಂದಿನ ಮೊಬೈಲ್ ಯುಗದಲ್ಲಿ ಜನಪದ ಕಲೆಗಳು ನಿಧಾನವಾಗಿ ನಶಿಸುತ್ತಿವೆ. ಅವುಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆ ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕಿರಣ ಚೌಗಲಾ ಅಭಿಪ್ರಾಯಪಟ್ಟರು
ಹುಕ್ಕೇರಿ ತಾಲೂಕಿನ ಯಲ್ಲಾಪುರ ಗ್ರಾಮದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದಲ್ಲಿ ಆಯೋಜಿಸಿದ್ದ ಜಾನಪದ ಕಲಾ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಸ್ಥಳೀಯ ಕಲೆ ಹಾಗೂ ಸಂಸ್ಕೃತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರೇಡಿಯೋ ಕೇಂದ್ರದ ಸಂಯೋಜಕ ಚೇತನ ಕುಲಕರ್ಣಿ ಮಾತನಾಡಿ ಡಿಜಿಟಲ್ ಯುಗದಲ್ಲಿ ಯುವಪೀಳಿಗೆ ಹೆಚ್ಚಾಗಿ ಪರದೆಗಳಿಗೆ ಸೀಮಿತವಾಗುತ್ತಿರುವುದರಿಂದ ಜನಪದ ಕಲೆಗಳತ್ತ ಆಸಕ್ತಿ ಕಡಿಮೆಯಾಗುತ್ತಿದೆ.
ಗ್ರಾಮೀಣ ಸಂಸ್ಕೃತಿ, ಜನಪದ ಕಥನ ಪರಂಪರೆಗಳು ನಿಧಾನವಾಗಿ ಮಂಕಾಗುತ್ತಿವೆ. ಈ ಅಮೂಲ್ಯ ಕಲೆಗಳನ್ನು ಉಳಿಸಲು ನಮ್ಮೂರ ಬಾನುಲಿ ವೇದಿಕೆ ಕಲ್ಪಿಸುತ್ತಿದೆ ಎಂದರು. ವಿವಿಧ ಗ್ರಾಮಗಳಿಂದ ಆಗಮಿಸಿದ ಹತ್ತಕ್ಕೂ ಹೆಚ್ಚು ಕಲಾತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಜನಪದ ಗೀತೆ, ಹಂತಿ ಪದ, ಲಾವಣಿ, ಏಕಪಾತ್ರಾಭಿನಯ, ಹಾಡು ಹಾಗೂ ನೃತ್ಯ ಪ್ರದರ್ಶನಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಪ್ರತಿಯೊಂದು ತಂಡವೂ ತಮ್ಮದೇ ಆದ ವೈಶಿಷ್ಟ್ಯಪೂರ್ಣ ಶೈಲಿಯಲ್ಲಿ ಪ್ರದರ್ಶನ ನೀಡಿ ಗ್ರಾಮೀಣ ಸಂಸ್ಕೃತಿಯ ವೈಭವವನ್ನು ಪರಿಚಯಿಸಿತು. ಕಾರ್ಯಕ್ರಮಕ್ಕೆ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಕೊನೆಗೆ ಮಹಾಂತೇಶ ವಂದಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 