ರಸ್ತೆ ಸುರಕ್ಷತಾ ನಿಯಮ ಪಾಲಿಸಿ, ಅಪಘಾತ ತಪ್ಪಿಸಿ
Follow road safety rules and avoid accidents
ಹೂವಿನಹಡಗಲಿ 23: ಜೀವ ಅಮೂಲ್ಯವಾದುದು, ರಸ್ತೆ ನಿಯಮಗಳನ್ನು ಪಾಲಿಸಿ ಸುರಕ್ಷಿತವಾಗಿರಿ ಎಂದು ಜೆಎಂಎಫ್ ಸಿ ನ್ಯಾಯಾಧೀಶರಾದ ಟಿ.ಅಕ್ಷತಾ ಹೇಳಿದರು. ಪಟ್ಟಣದಲ್ಲಿ ಗುರುವಾರ ತಾಲೂಕು ಕಾನೂನು ಸೇವಾ ಸಮಿತಿ, ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ಜಂಟಿ ಸಹಯೋಗದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮಟ್ ಧರಿಸಬೇಕು. ರಸ್ತೆ ಅಪಘಾತಗಳು ಸಂಭವಿಸಿದಾಗ ಕೇವಲ ವ್ಯಕ್ತಿಯಷ್ಟೇ ಅಲ್ಲ, ಇಡೀ ಕುಟುಂಬವೇ ಸಂಕಷ್ಟಕ್ಕೆ ಸಿಲುಕಿ ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ತಮಗಾಗಿ ಅಲ್ಲದ್ದಿದ್ದರೂ ತಮ್ಮ ಕುಟುಂಬಕ್ಕಾಗಿಯಾದರೂ ಹೆಲ್ಮಟ್ ಧರಿಸಬೇಕು. ಸವಾರರು ಕೇವಲ ದಂಡಕ್ಕೆ ಹೆದರಿ ಸಂಚಾರಿ ನಿಯಮ ಪಾಲಿಸುವುದಕ್ಕಿಂತ, ನಮ್ಮ ಜೀವದ ರಕ್ಷಣೆಗಾಗಿ, ಸ್ವಯಂಪ್ರೇರಿತರಾಗಿ ರಸ್ತೆ ಸಂಚಾರಿ ನಿಯಮ ಪಾಲಿಸಬೇಕು ಎಂದರು. ಅಧಿಕಾರಿಗಳಾದ ಮಹಮ್ಮದ್ ಶರೀಪ್ಸಾಬ್, ಸತ್ಯನಾರಾಯಣ್ಣ, ವಕೀಲರ ಸಂಘದ ಅಧ್ಯಕ್ಷ ಮಂಜುನಾಥ ಜೈನ್, ಉಪಾಧ್ಯಕ್ಷ ಶಿವಲಿಂಗಪ್ಪ, ಕಾರ್ಯದರ್ಶಿ ಪ್ರಶಾಂತ್, ಸಹಕಾರ್ಯದರ್ಶಿ ಪತ್ರಿಬಸಪ್ಪ, ಹಿರಿಯ ವಕೀಲರಾದ ಅಟವಾಳಗಿ ಕೊಟ್ರೇಶ್ ಇತರರಿದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 