ಯೋಗಿ ನಾರೇಯಣ ರವರ ತತ್ವಾದರ್ಶಗಳನ್ನು ಪಾಲಿಸಿ : ಅಪರ ಜಿಲ್ಲಾಧಿಕಾರಿ.
ಕಾರವಾರ 14: ಯೋಗಿ ನಾರೇಯಣ ರವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಅರಿತುಕೊಂಡು ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಡಯಬೇಕೆಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಹೇಳಿದರು. ಅವರು ಶುಕ್ರವಾರ ಜಿಲ್ಲಾಡಳಿತ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಯೋಗಿ ನಾರೇಯಣ ಯತೀಂದ್ರ ಜಯಂತಿ ಕಾರ್ಯಕ್ರಮದಲ್ಲಿ ಯೋಗಿನಾರೇಯಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ನಾರೇಯಣ ಯತ್ರೀಂದ ರವರು ಬಲಿಜ ಸಮುದಾಯದಲ್ಲಿ ಜನಿಸಿ ತಮ್ಮ ಪರಂಪರೆಯಾದ ವೃತ್ತಿಯಾದ ಬಳೆ ವ್ಯಾಪಾರದಲ್ಲಿ ತೊಡಗಿಕೊಂಡು ನಂತರ ಯೋಗಿಗಳಾಗಿ ಪರಿವರ್ತನೆಗೊಂಡು ನಾಡಿನಲ್ಲಿ ಪ್ರಸಿದ್ದಿಯಾದವರು. ಅವರು ಕಾಲಜ್ಞಾನಿಯಾಗಿದ್ದು, ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದರು. ಪ್ರತಿಯೊಬ್ಬರು ಅವರ ಜೀವನ ಚರಿತ್ರೆ, ತತ್ವಾದರ್ಶಳಿಂದ ಪ್ರಭಾವಿಗಳಾಗಿ ಸನ್ಮಾರ್ಗದಲ್ಲಿ ನಡೆದು ಸಮಾಜದಲ್ಲಿ ತಮ್ಮದೇ ಆದ ಛಾಪು ಮೂಡಿಸಬೇಕು ಎಂದರು ವಿದ್ಯಾರ್ಥಿಗಳು ಜಾತಿ, ಧರ್ಮ, ಕೀಳಿರುಮೆಯ ಮಾನಸಿಕ ಸ್ಥಿತಿಯನ್ನು ಮೆಟ್ಟಿ ನಿಂತು, ತಮ್ಮಲ್ಲಿರುವ ಸಾಮಥ್ಯವನ್ನು ಬೆಳೆಸಿಕೊಂಡು ಅದನ್ನು ಸದುಪಯೋಗ ಪಡೆದುಕೊಂಡು ಉನ್ನತ ಹುದ್ದೆಗಳನ್ನು ಪಡೆಯಬೇಕು. ಎಂದರು ಶಿಕ್ಷಕ ಡಾ. ಗಣೇಶ್ ಎನ್ ಬಿಷ್ಠಣ್ಣನವರು ಶ್ರೀ ಯೋಗಿ ನಾರೇಯಣರವರ ಕುರಿತು ವಿಶೇಷ ಉಪನ್ಯಾಸ ನೀಡಿ, ಇವರು ಕೋಲಾರ ಜಿಲ್ಲೆಯ ಕೈವಾರ ಎಂಬ ಗ್ರಾಮದಲ್ಲಿ ಜನಿಸಿದ್ದು, ಬಾಲ್ಯದಲ್ಲೇ ಹೆತ್ತವರನ್ನು ಕಳೆದುಕೊಂಡ ಹುಡುಗ ನಾರಾಣಪ್ಪ ಅಮರನಾರಾಯಣ ದೇವಸ್ಥಾನದ ಅರ್ಚಕರ ಆಶ್ರಯಲ್ಲಿ ಬೆಳೆದನು. ಓದಿನಲ್ಲಿ ಅಷ್ಟೇನೂ ಆಸಕ್ತಿ ಇಲ್ಲದೇ ಯಾವಾಗಲೂ ಆಧ್ಯಾತ್ಮದಲ್ಲಿ ಚಿಂತನ ಮಂಥನ ನಡೆಸುವುದರಲ್ಲಿ ಮಗ್ನನಾಗಿದ್ದು, ಪದ್ಯ, ಕೀರ್ತನೆ ಹಾಗೂ ಸ್ತೋತ್ರಗಳ ಮೂಲಕ ಸಾಹಿತ್ಯ ರೂಪದಲ್ಲಿ ಜನತೆಗೆ ತಿಳಿಸಿಕೊಟ್ಟ ಮಹಾನ್ ಯೋಗಿ. ಪ್ರಪಂಚದಲ್ಲಿಯೇ ಮುಂದೊಂದು ದಿನ ನಡೆಯಬಹುದಾದ ಪಾಪ ಕೃತ್ಯಗಳ ಪ್ರಾಬಲ್ಯ, ಪ್ರಳಯ ಸಂಪತ್ತಿನ ವಿನಾಶ, ಘೋರ ವೈಪರಿತ್ಯಗಳು, ಭ್ರಷ್ಟಚಾರ, ದೌರ್ಜನ್ಯ, ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ, ಧಾರ್ಮಿಕವಾಗಿ ನಡೆಯುವ ಅನ್ಯಾಯದ ಘಟನೆಗಳನ್ನು ಶ್ರೀ ಯೋಗಿ ನಾರೇಯಣ ಯತೀಂದ್ರ ಅವರು ಕಾಲಜ್ಞಾನದಲ್ಲಿ ತಿಳಿಸಿದ್ದಾರೆ. ಅನೇಕ ಪವಾಡಗಳನ್ನು ಮಾಡಿದ್ದಾರೆ ಎಂದು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ಎಂ ನಾಯ್ಕ, ಸಮತಿ ದಮ್ಲೆ ಬಾಲಕೀಯರ ಪ್ರೌಡ ಶಾಲೆಯ ಶಿಕ್ಷಕ ಸಂತೋಷ್ ಎಂ ಶೇಟ್, ಸರಸ್ಪತಿ ವಿದ್ಯಾಲಯದ ವಿದ್ಯಾರ್ಥಿಗಳು, ಮತ್ತಿತರರು ಇದ್ದರು.