ಅಕ್ರಮವಾಗಿ ಪಡಿತರ ಧಾನ್ಯ ಸಾಗಾಟ ಆಹಾರ ಇಲಾಖೆ ದಾಳಿ
Food Department raids illegal transportation of ration grains
ಅಕ್ರಮವಾಗಿ ಪಡಿತರ ಧಾನ್ಯ ಸಾಗಾಟ ಆಹಾರ ಇಲಾಖೆ ದಾಳಿ
ವಿಜಯಪುರ, ಸೆಪ್ಟೆಂಬರ್ 15 : ನಗರದ ಸೋಲಾಪುರ ರಾಷ್ಟ್ರೀಯ ಹೆದ್ದಾರಿ ವಿಜಯ ಟೈಯರ್ಸ್ ಹತ್ತಿರ ಸೆ.13ರಂದು ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಸೋಲಾಪುರ ರಾಷ್ಟ್ರೀಯ ಹೆದ್ದಾರಿ ವಿಜಯ ಟೈಯರ್ಸ್ ಹತ್ತಿರ ತಡೆದು ವಿಚಾರಿಸಿ, ಒಟ್ಟು 210 ಕ್ವಿಂಟಲ್ 43 ಕೆಜಿ ರೂ 4,76,310 ಮೌಲ್ಯದ ಪಡಿತರ ಧಾನ್ಯ ಜಪ್ತಿ ಮಾಡಿ ಅಗತ್ಯ ವಸ್ತುಗಳ ಕಾಯ್ದೆ 1955ರ ಮೇರೆಗೆ ಆದರ್ಶನಗರ ಪೋಲಿಸ್ ಠಾಣೆಯಲ್ಲಿ ಗಜಾನನ ಮಕಾಲೆ ಎನ್ನುವವರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.
ಈ ದಾಳಿಯಲ್ಲಿ ವಿಜಯಪುರ ನಗರದ ಆಹಾರ ನೀರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ, ಆದರ್ಶನಗರ ಪಿಎಸ್‌ಐ ಸೀತಾರಾಮ ಲಮಾಣಿ ಸೇರಿದಂತೆ ಪೋಲಿಸ್ ಹಾಗೂ ಆಹಾರ ಇಲಾಖೆಯ ಸಿಬ್ಬಂದಿ ಈ ದಾಳಿಯಲ್ಲಿ ಇದ್ದರು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯಕುಮಾರ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 