ಬೆಳಗಾವಿ: ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆಯಾದ ಸೇವಾ ಭದ್ರತೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ನೀಡಬೇಕೆಂದು ಕನರ್ಾಟಕ ರಾಜ್ಯ ಸಕರ್ಾರಿ ಪ್ರಥಮ ದಜರ್ೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ, ಬೆಳಗಾವಿ ಜಿಲ್ಲಾಧ್ಯಕ್ಷ ಡಾ.ರಾಜುಕಂಬಾರ ಆಗ್ರಹಿಸಿದರು.
ಶುಕ್ರವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಳೆದ 10 ವರ್ಷಗಳಿಂದ ಸಂಘವು ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗಾಗಿ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಸಂಘಟನಾತ್ಮಕವಾಗಿ ಪ್ರತಿಭಟನೆಗಳನ್ನು ಮಾಡುತ್ತಲೇ ಬಂದಿದೆ. ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಮಾಡಿದ್ದೇವೆ. ಬಡತನದ ಬೇಗೆಯಲ್ಲಿ ಬೆಂದು ನೊಂದು 10 ವರ್ಷಗಳ ಅವಧಿಯಲ್ಲಿ ಹಲವಾರು ಅತಿಥಿ ಉಪನ್ಯಾಸಕರು ಅಸುನೀಗಿದ್ದಾರೆ. ನೂರಾರು ಅತಿಥಿ ಉಪನ್ಯಾಸಕರ ವಯೋಮಿತಿ ಮೀರಿದೆ. ಸರಕಾರ ಮಾನವೀಯತೆಯ ನೆಲೆಯಲ್ಲಾದರೂ ಯೋಚಿಸಿ ಅತಿಥಿಉಪನ್ಯಾಸಕರಿಗೆ ಸೇವಾ ಭದ್ರತೆಯನ್ನು ನೀಡಬೇಕು.
2018ರ ಕನರ್ಾಟಕ ರಾಜ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಸಿಎಂ ಎಚ್.ಡಿ.ಕುಮಾರ ಸ್ವಾಮಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ನಮ್ಮ ಸಕರ್ಾರ ರಚನೆಯಾಗಿ ನಾನು ಮುಖ್ಯಮಂತ್ರಿಯಾದರೆ ಖಂಡಿತವಾಗಿಯೂ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವುದಾಗಿ ಹೇಳಿದ್ದರು. ಬೆಳಗಾವಿ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘವು ಚುನಾವಣಾ ಪೂರ್ವದಲ್ಲಿ ಗೋಕಾಕ ತಾಲೂಕಿನ ಕುಲಗೋಡ
ಗ್ರಾಮದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸೇವಾ ಭದ್ರತೆಯ ಕುರಿತು ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಹೀಗೆ ಹೇಳಿದ್ದರು. ಅದರಂತೆ ಜೆ.ಡಿ.ಎಸ್. ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಕ್ರ.ಸಂ.29 ರಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಲಾಗುವುದೆಂದು ತಿಳಿಸಲಾಗಿದೆ. ಮಾತುಕೊಟ್ಟಂತೆ ಮುಖ್ಯಮಂತ್ರಿಗಳು ರಾಜ್ಯದ 412 ಪದವಿ ಕಾಲೇಜುಗಳಲ್ಲಿ ಬೋಧನೆ ಮಾಡುತ್ತಿರುವ ಎಲ್ಲ ಅತಿಥಿ ಉಪನ್ಯಾಸಕರಿಗೆ ಭದ್ರತೆ ನೀಡಬೇಕು.
2003ರಲ್ಲಿ ಸಾಕರ್ಾರಿ ಪ್ರಥಮದಜರ್ೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ ಅರೆಕಾಲಿಕ ಉಪನ್ಯಾಸಕರನ್ನು ಸೇವಾ ಹಿರಿತನದ ಆಧಾರದಲ್ಲಿ ವಿಲೀನಗೊಳಿಸಲಾಗಿದೆ. ಶೈಕ್ಷಣಿಕ ವರ್ಷದಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ 2016-17ನೇ ಸಾಲಿನಲ್ಲಿ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ವಿದ್ಯಾರ್ಹತೆ, ಸೇವಾ ಹಿರಿತನ ಮತ್ತು ವಯೋಮಿತಿ ಆಧಾರದಲ್ಲಿ ವಿಲೀನಗೊಳಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಸ್ತುತ ಬೆಳಗಾವಿ ಜಿಲ್ಲೆಯಲ್ಲಿ 22 ಸಕರ್ಾರಿ ಪ್ರಥಮದಜರ್ೆ ಕಾಲೇಜುಗಳಿವೆ. ಸುಮಾರು 650ಕ್ಕೂ ಹೆಚ್ಚು ಅತಿಥಿಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 12000 ಕ್ಕಿಂತಲು ಹೆಚ್ಚು ಅತಿಥಿ ಉಪನ್ಯಾಸಕರು ಸೇವೆಯಲ್ಲಿದ್ದಾರೆ. ಜಿಲ್ಲೆಯಲ್ಲಿ 20000 ಹಾಗೂ ರಾಜ್ಯದಲ್ಲಿ 3.5 ಲಕ್ಷ ವಿದ್ಯಾಥರ್ಿಗಳು ಸಕರ್ಾರಿ ಪ್ರಥಮ ದಜರ್ೆ ಕಾಲೇಜುಗಳಲ್ಲಿ ಓದುತ್ತಿದ್ದಾರೆ. ಅವರೆಲ್ಲರ ಭವಿಷ್ಯವನ್ನು ರೂಪಿಸುವ ಅತಿಥಿ ಉಪನ್ಯಾಸಕರ ಭವಿಷ್ಯ ಹಾಳಾಗುತ್ತಿದೆ.
ಆಂಧ್ರಪ್ರದೇಶ, ಹರಿಯಾಣ, ಗುಜರಾತ, ತಮಿಳನಾಡು ಮೊದಲಾದ ರಾಜ್ಯಗಳಲ್ಲಿ 20 ರಿಂದ 30 ಸಾವಿರದವರೆಗೆ ತಿಂಗಳ ವೇತನ ನೀಡುತ್ತಿದ್ದಾರೆ. ದೆಹಲಿಯಲ್ಲಿ ಅತಿಥಿಉಪನ್ಯಾಸಕರನ್ನು ಖಾಯಂಗೊಳಿಸಲಾಗಿದೆ. ರಾಜ್ಯದಲ್ಲಿ ಅತಿಥಿ ಉಪನ್ಯಾಸಕರಿಗೆ ಕೇವಲ 11000 ರಿಂದ 13000 ರೂ. ಮಾತ್ರ ವೇತನ ನೀಡುತ್ತಿವೆ. ಇದು ಅತ್ಯಂತ ಕನಿಷ್ಟ ವೇತನವಾಗಿದೆ. ಪ್ರಸಕ್ತ ವರ್ಷದಲ್ಲಿ 5 ತಿಂಗಳ ವೇತನವನ್ನು ಇದುವರೆಗೂ ಬಿಡುಗಡೆಗೊಳಿಸಿಲ್ಲ. ಖಾಯಂ ಉಪನ್ಯಾಸಕರಿಗೆ ದೊರೆಯುವ ಸೌಲಭ್ಯಗಳೆಲ್ಲವನ್ನು ಅತಿಥಿ ಉಪನ್ಯಾಸಕರಿಗೆ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಸಕರ್ಾರ ನೀಡಬೇಕು.
ರಾಜ್ಯ ಸಕರ್ಾರ ಮಹಿಳಾ ನೌಕರರಿಗೆ ನೀಡುವ ಹೆರಿಗೆ ಇನ್ನಿತರ ಸೌಲಭ್ಯಗಳನ್ನು ಅತಿಥಿ ಉಪನ್ಯಾಸಕಿಯರರಿಗೂ ಒದಗಿಸಬೇಕು. ಎಂ.ಫಿಲ್. ಪದವಿಯನ್ನು ಪರಿಗಣಿಸಿ ಸಮಾನ ವೇತನ ನೀಡಬೇಕು. ಈ ಎಲ್ಲ ಬೇಡಿಕೆಗಳನ್ನು ಸಕರ್ಾರ ಮಾತುಕೊಟ್ಟಂತೆ ತುತರ್ಾಗಿ ಈಡೇರಿಸಬೇಕೆಂದು ಕುಮಾರಸ್ವಾಮಿಅವರಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಜಿಲ್ಲಾ ಮಟ್ಟದ ಅತಿಥಿ ಉಪನ್ಯಾಕರ ಸಭೆಯನ್ನು ಶನಿವಾರ ನ.26 ರ ಮುಂಜಾನೆ 10:30 ಘಂಟೆಗೆ ಕನ್ನಡ ಸಾಹಿತ್ಯ ಭವನದಲ್ಲಿ ಕರೆಯಲಾಗಿದೆ. ಸಭೆಯಲ್ಲಿ ಅಂತಿಮವಾಗಿ ನಿಧರ್ಾರಗಳನ್ನು ಕೈಗೊಳ್ಳಲಾಗುತ್ತದೆ.
ಒಂದು ವೇಳೆ ನಮ್ಮ ಬೇಡಿಕೆಗಳು ಬೇಗ ಈಡೇರದಿದ್ದರೆ 2018ರ ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ಜರುಗುವ ಅಧಿವೇಶನ ಸಮಯದಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಅನಾಹುತಗಳಿಗೆಲ್ಲ ಸರಕಾರವೇ ನೇರ ಹೊಣೆಯಾಗಲಿದೆ ಎಂದು ಡಾ.ಕಂಬಾರ ಎಚ್ಚರಿಸಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಬಸವರಾಜ ಹುಲಮನಿ, ವಿಠ್ಠಲ ಮಾಳವದೆ, ಪಿ.ಬಿ. ಮಬನೂರ, ಲಕ್ಷ್ಮೀ ಹಂಚಿನಮನಿ ಮೊದಲಾದವರು ಭಾಗವಹಿಸಿದ್ದರು.