ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹೊರಗುತ್ತಿಗೆ ನೌಕರರ ಸಂಘಟನೆಯಿಂದ ಒತ್ತಾಯ

Forced by the organization of outsourced employees to meet various demands

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹೊರಗುತ್ತಿಗೆ ನೌಕರರ ಸಂಘಟನೆಯಿಂದ ಒತ್ತಾಯ

ಹಾವೇರಿ 22: ರಾಜ್ಯದ ವಿವಿಧ ಇಲಾಖೆಗಳಡಿಯಿರುವ ಹಾಸ್ಟೆಲ್ ಹಾಗೂ ವಸತಿ ಶಾಲೆ-ಕಾಲೇಜುಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಮಾಸಿಕ ರೂ.31 ಸಾವಿರ ಕನಿಷ್ಠ ವೇತನ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘಟನೆಯ ಮುಖಂಡರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.  

   ನಗರದ ಹೊರವಲಯದಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಅಪರ ಜಿಲ್ಲಾಧಿಕಾರಿಗಳಾದ ಡಾ. ನಾಗರಾಜ್ ಎಲ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ಕಳೆದ 15-20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ-ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್ ಅಟೆಂಡರ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್ಗಳು, ಹೊರಗುತ್ತಿಗೆ ಶಿಕ್ಷಕರು, ದಿನಗೂಲಿ ನೌಕರರು ಯಾವುದೇ ಭದ್ರತೆ ಇಲ್ಲದೆ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರು ಸಾಕಷ್ಟು ಶೋಷಣೆಯನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ ರಾಜ್ಯ ಸರಕಾರ ಹಾಸ್ಟೇಲ್ ನೌಕರರಿಗೆ ಹೊರಗುತ್ತಿಗೆ ಬದಲಾಗಿ ನೇರವಾಗಿ ಇಲಾಖೆಯಿಂದ ವೇತನ ಕೊಡಬೇಕು. ನಿವೃತ್ತಿವರೆಗೆ ಸೇವಾಭದ್ರತೆ ಕೊಡಬೇಕು.  

ಕಾರ್ಮಿಕ ಕಾನೂನು ಪ್ರಕಾರ ಕಡ್ಡಾಯವಾಗಿ ವಾರಕ್ಕೆ ಒಂದು ರಜೆ ಕೊಡಬೇಕು. ಕೆಲಸದ ಸಮಯ ನಿಗಧಿ ಆಗಬೇಕು.  ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ (ರಿ) ವನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಬೇಕು. ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ, ಐ.ಡಿ ಕಾರ್ಡ, ಸರ್ವೀಸ್ ಸರ್ಟಿಫಿಕೇಟ್, ಇಖಋ ಮತ್ತು ಕಈ ಹಣ ತುಂಬಿದ ರಶೀದಿ ಕೊಡಬೇಕು. ಹಿಂದುಳಿದ ವರ್ಗ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿತ ಮಾಡಿರುವ ಆದೇಶ ರದ್ದಾಗಬೇಕು. 50 ವಿದ್ಯಾರ್ಥಿಗಳಿಗೆ 3 ಜನ ಸಿಬ್ಬಂದಿಯಂತೆ ಹಿಂದಿನ ಪದ್ಧತಿ ಮುಂದುವರಿಸಬೇಕು. ಪ್ರತಿ ತಿಂಗಳು 5ನೇ ತಾರೀಖು ಸಂಬಳ ಕೊಡಬೇಕು. ಬಾಕಿ ಇರುವ ಸಂಬಳವನ್ನು ತಕ್ಷಣ ಪಾವತಿ ಮಾಡಬೇಕು. 10 ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ಎಲ್ಲರನ್ನೂ ತರಬೇಕು.  

      ಬಿಸಿಎಂ ಇಲಾಖೆಯಲ್ಲಿ ಕೆಲಸ ಕಳೆದುಕೊಂಡಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ಮತ್ತೆ ಮರು ನೇಮಕ ಮಾಡಿಕೊಳ್ಳಬೇಕು. ಹೊಸದಾಗಿ ಪ್ರಾರಂಭ ಮಾಡುವ ಹಾಸ್ಟೆಲ್ಗಳಿಗೆ ಕಡ್ಡಾಯವಾಗಿ ಕೆಲಸಕ್ಕೆ ತೆಗೆದುಕೊಳ್ಳಬೇಕು. ಅಡುಗೆಯವರು. ಅಡುಗೆ ಸಹಾಯಕರು, ಸ್ವಚ್ಛತಾಗಾರರಿಂದ ಶೌಚಾಲಯ ಸ್ವಚ್ಛ ಮಾಡಿಸಬಾರದು. ವಸತಿ ನಿಲಯ ಮತ್ತು ಹಾಸ್ಟೆಲ್ಗಳಿಗೆ ವಾರ್ಡನ್ ರವರು ಮಕ್ಕಳ ಅಡುಗೆಗೆ ಅಗತ್ಯವಾಗಿ ಬೇಕಾದ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಸರಿಯಾದ ಪ್ರಮಾಣದಲ್ಲಿ ತಂದು ಕೊಡಬೇಕು. ನಿವೃತ್ತಿ ನಂತರ ಜೀವನ ನಿರ್ವಹಣೆಗೆ 10 ಲಕ್ಷ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು 

ಈ ಸಂದರ್ಭದಲ್ಲಿ ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಮುಖಂಡರಾದ ಶಾಂತಾ ಗಡ್ಡಿಯವರ, ಎಚ್‌.ಎಚ್ ನಧಾಪ, ಶಿವರಾಜಕುಮಾರ್ ಎನ್ ಹಿತ್ಲರ್, ಶೋಭಕ್ಕ ಡೊಳ್ಳೇಶ್ವರ, ಮಂಜುನಾಥ ಇಂಗಳಗಿ, ಪುಟ್ಟಮ್ಮ ಧೂಳಿಕೊಪ್ಪ, ವಿನೋದಾ ಕಾಗೇರ, ಯಲ್ಲಪ್ಪ ಹರಿಜನ, ಸುಜಾತಾ ಆರೇಗೊಪ್ಪ ಇದ್ದರು.