ಬಾಚಣಕಿ ಗ್ರಾಮದಲ್ಲಿ ಒಂದೇ ಸ್ಥಳದಲ್ಲಿ ಎರಡು ವಿಷಕಾರಿ ಹಾವುಗಳನ್ನು ರಕ್ಷಿಸಿದ ಅರಣ್ಯ ಸಿಬ್ಬಂದಿ
Forest guards rescue two poisonous snakes at one location in Bachanaki village
ಮುಂಡಗೋಡ 28: ತಾಲ್ಲೂಕಿನ ಬಾಚಣಕಿ ಗ್ರಾಮದ ಅರಣ್ಯ ವೀಕ್ಷಕರಾದ ಗುತ್ತೇಪ್ಪ ಪಕೀರ್ಪ ಗೊನೆನವರ ಅವರ ಮನೆಯ ಹತ್ತಿರ ದೊಡ್ಡ ಗಾತ್ರದ ಕೊಳಕು ಮಂಡಲ ಹಾವು ಹಾಗೂ ನಾಗರಹಾವು ಕಾಣಿಸಿಕೊಂಡ ಘಟನೆ ನಡೆದಿದೆ. ವಿಷಯ ತಿಳಿದ ಕೂಡಲೇ ಮುಂಡಗೋಡ ತಾಲೂಕಿನ ಗಸ್ತು ವನಪಾಲಕ ಮುತ್ತುರಾಜ್ ಹಳ್ಳಿ ಅವರು ಸ್ಥಳಕ್ಕೆ ಆಗಮಿಸಿ, ಎರಡೂ ವಿಷಕಾರಿ ಹಾವುಗಳನ್ನು ಯಾವುದೇ ಅಪಾಯವಾಗದಂತೆ ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡುವಲ್ಲಿ ಯಶಸ್ವಿಯಾದರು. ಒಂದೇ ಸ್ಥಳದಲ್ಲಿ ಎರಡು ವಿಭಿನ್ನ ವಿಜಾತಿಯ ವಿಷಕಾರಿ ಹಾವುಗಳು ಕಂಡುಬಂದಿರುವುದು ವಿಶೇಷವಾಗಿದ್ದು, ಈ ಕಾರ್ಯಾಚರಣೆ ಅರಣ್ಯ ಇಲಾಖೆಯ ತ್ವರಿತ ಸ್ಪಂದನೆಗೆ ಉತ್ತಮ ಉದಾಹರಣೆಯಾಗಿದೆ.ಅಲ್ಲದೆ, ಸದರಿ ಮನೆಯ ಹತ್ತಿರ ಒಂದೇ ವಾರದ ಅವಧಿಯಲ್ಲಿ ಒಟ್ಟು ಐದು ವಿಷಕಾರಿ ಹಾವುಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸುರಕ್ಷಿತವಾಗಿ ರಕ್ಷಿಸಿರುವುದು ಗಮನಾರ್ಹ ಸಂಗತಿಯಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 