ಮಾಜಿ ಶಾಸಕ ರವೀಂದ್ರ ಇನ್ನಿಲ್ಲ
ಬೆಂಗಳೂರು 03: ರಾಜ್ಯದ ಮಾಜಿ ಉಪಮುಖ್ಯಮಂತ್ರಿ ದಿ.ಎಂ.ಪಿ.ಪ್ರಕಾಶ್ ರವರ ಪುತ್ರ, ಹರಪನಹಳ್ಳಿ ಮಾಜಿ ಶಾಸಕ ಎಂ.ಪಿ.ರವೀಂದ್ರ ರವರು ಇಂದು ಬೆಳಗ್ಗೆ 3.45 ಗಂಟೆಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ರಾಜ್ಯ ರಾಜಕಾರಣ ಮತ್ತು ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಎಂ.ಪಿ.ರವೀಂದ್ರರವರು, ಅಪಾರ ಬಂಧುಬಳಗ ಮತ್ತು ಅಭಿಮಾನಿ ವರ್ಗವನ್ನು ಅಗಲಿದ್ದಾರೆ.
ಬೆಂಗಳೂರಿನ ಗಾಂಧಿಭವನ ಹತ್ತಿರದ ವಲ್ಲಭ ನಿಕೇತನದಲ್ಲಿ ಇಂದು ಬೆಳಗ್ಗೆ 9.00 ಗಂಟೆಯಿಂದ ಬೆಳಗ್ಗೆ 10.30 ರವರೆಗೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿರುತ್ತದೆ.
ನಂತರ ರಸ್ತೆ ಮುಖಾಂತರ ಹರಪನಹಳ್ಳಿಗೆ ತೆರಳಿ ಮಧ್ಯಾಹ್ನ 3.00 ಗಂಟೆಯಿಂದ 6.00 ಗಂಟೆಯವರೆಗೆ ಸ್ಥಳೀಯ ಎ.ಡಿ.ಬಿ ಕಾಲೇಜು ಮೈದಾನದಲ್ಲಿ ಪಾಥರ್ಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.
ನಂತರ ಸ್ವಗ್ರಾಮ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಗೆ ತೆರಳಿ ನಾಳೆ ಬೆಳಗ್ಗೆ 11.00 ಗಂಟೆಯವರೆಗೆ ಜಿ.ಬಿ.ಆರ್. ಕಾಲೇಜು ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, ನಂತರ ಅಪರಾಹ್ನ 12.00 ಗಂಟೆಗೆ ದಿ.ಎಂ.ಪಿ.ಪ್ರಕಾಶ್ ರವರ ಸಮಾಧಿ ಹತ್ತಿರ ಅಂತಿಮ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ವರ್ಗ ತಿಳಿಸಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 