ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್ ನಿಧನ
Former MLA of Yalaburga Constituency Shivsharanappa Gowda Patil passed away
ಯಲಬುರ್ಗಾ 26 : ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ (82) ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ. ಮೃತರರಿಗೆ ನಾಲ್ಕು ಜನ ಪುತ್ರರು ಮತ್ತು ಪತ್ನಿಯನ್ನು ಅಗಲಿದ್ದಾರೆ. ಮೃತರು ಪತ್ನಿ, ಜಿ.ಪಂ ಮಾಜಿ ಸದಸ್ಯ ಅರವಿಂದಗೌಡ ಪಾಟೀಲ್ ಸೇರಿ ಒಟ್ಟು ನಾಲ್ಕು ಜನ ಪುತ್ರರು, ಓರ್ವ ಪುತ್ರಿ ಸೇರಿದಂತೆ ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.ಶಿವಶರಣಪ್ಪಗೌಡ ಅವರು 1999ರಿಂದ 2004ರ ವರೆಗೂ ಯಲಬುರ್ಗಾ ಕ್ಷೇತ್ರದ ಜನಪ್ರಿಯ ಶಾಸಕರಾಗಿದ್ದರು.
ರೈತರ ಸಮಸ್ಯೆಗಳಿಗೆ ಧ್ವನಿಯಾಗಿದ್ದಲ್ಲದೆ, ಮೂಲ ಸೌಕರ್ಯಗಳ ಅಭಿವೃದ್ಧಿಗೂ ವಿಶೇಷ ಗಮನ ನೀಡಿದ್ದರು.ಯಲಬುರ್ಗಾ ಪಟ್ಟಣದ ಅವರ ನಿವಾಸದಲ್ಲಿ ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಬೆಳಿಗ್ಗೆ 9 ಗಂಟೆ ವರೆಗೆ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ. ಸ್ವಗ್ರಾಮ ಹುಣಸಿಹಾಳ ಗ್ರಾಮದಲ್ಲಿ ಗುರುವಾರ 4:00 ಗಂಟೆಗೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.ಇವರ ನಿಧನಕ್ಕೆ ಕ್ಷೇತ್ರದ ರಾಜಕೀಯ ಮುಖಂಡರು, ಅಭಿಮಾನಿಗಳು, ಅವರ ಅಪಾರ ಕಾರ್ಯಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಚಿ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 