ಹಳೆ ವಿದ್ಯಾರ್ಥಿಗಳಿಂದ ಗುರುಗಳಿಗೆ ಸನ್ಮಾನ: ವೃದ್ಧಾಶ್ರಮದಲ್ಲಿ ಅನ್ನದಾನ
Former students pay tribute to teachers: Food distribution at old age home
ಹಳೆ ವಿದ್ಯಾರ್ಥಿಗಳಿಂದ ಗುರುಗಳಿಗೆ ಸನ್ಮಾನ: ವೃದ್ಧಾಶ್ರಮದಲ್ಲಿ ಅನ್ನದಾನ
ಬಳ್ಳಾರಿ 15: ನಗರದ ವಾರ್ಡ್‌ಲಾ ಪದವಿ ಪೂರ್ವ ಕಾಲೇಜಿನ 1994 ಬ್ಯಾಚ್ ವಾಣಿಜ್ಯ ವಿಭಾಗದ ಹಳೇ ವಿದ್ಯಾರ್ಥಿಗಳ ಪುನರ್ ಸಂಘಟಿಸಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜಿನ ತಮ್ಮ ಹಳೆಯ ನೆನಪುಗಳನ್ನು ಮೆಲಕು ಹಾಕಲಾಯಿತು. ತಮಗೆ ವಿದ್ಯಾ ಬುದ್ಧಿಗಳನ್ನು ಕಲಿಸಿದ ಗುರುಗಳನ್ನು ಸನ್ಮಾನಿಸಲಾಯಿತು. ಎರಡು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ನಿರಾಶ್ರಿತರಿಗೆ ಬೆಡ್‌ಶೀಟ್‌ಗಳನ್ನು ವಿತರಿಸಲಾಯಿತು. ವೃದ್ಧಾಶ್ರಮದಲ್ಲಿ ಅನ್ನದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಅಂದಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ರಾಜಶೇಖರ್ ಮಾತನಾಡುತ್ತಾ, ವಿದ್ಯಾರ್ಥಿಗಳ ಏಳಿಗೆಗೆ ಇದೇ ನಿಜವಾದ ಗುರವಂದನಾ ಕಾರ್ಯಕ್ರಮ ಎಂದು ಅಭಿನಂದಿಸಿದರು. ವಿಕ್ಟರ್, ದ್ವಾರಕಬಾಯಿ, ಪ್ರಹ್ಲಾದ ಚೌಧರಿ ಉಪನ್ಯಾಸಕರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಾದ ಬಿ.ಪಿ.ಸತೀಶ್, ಬಿಲ್ವರಾಜೇಶ್, ಸುಕುಮಾರ್, ಕವಿತ, ಗೌರಿ, ನಾಗರಾಜ್, ಗೀತ, ಸಂತೋಷ್, ಶೋಭಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 