ಬೈಕ್ -ಬೈಕ್ ಮಧ್ಯೆ ಡಿಕ್ಕಿ : ನಾಲ್ವರಿಗೆ ಗಂಭೀರ ಗಾಯ
ಖಾನಾಪುರ, 14: ಖಾನಾಪುರ ರಸ್ತೆಯ ಮಚ್ಛೆ ಬಳಿ ಬೈಕ್ -ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ನಾವಗೆಯ ಸಾತೇರಿ ನಿಂಗಪ್ಪ ಬೆಳಗಾಂವ್ಕರ್ (26), ನಾವಗೆಯ ರಾಹುಲ್ ದೇವಪ್ಪ ಗುರವ (22), ಮಂಡೋಳಿ ಶಿವಾಜಿ ಚೌಕ್ ನ ಮಂಗೇಶ ದಳವಿ (25) ಗಾಯಗೊಂಡಿದ್ದು, ಮತ್ತೋರ್ವನ ಹೆಸರು ಗೊತ್ತಾಗಿಲ್ಲ.
ಗಾಯಾಳುಗಳಲ್ಲಿ ಇಬ್ಬರನ್ನು ಹುಬ್ಬಳ್ಳಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಇನ್ನಿಬ್ಬರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗೇಶ ದಳವಿ ಮನೆ ಕಟ್ಟಿಸುತ್ತಿದ್ದು, ಮನೆಗಾಗಿ ಇಟ್ಟಂಗಿ ತರಲು ದೇಸೂರಿಗೆ ಹೋಗುತ್ತಿದ್ದರು ಎನ್ನಲಾಗಿದೆ.
ಬೆಳಗಾವಿ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 