ಟ್ರ್ಯಾಕ್ಟರ್‌ಗೆ ಹಿಂಬದಿ ಕಾರು ಡಿಕ್ಕಿ: ನಾಲ್ವರು ಯುವಕರ ದಾರುಣ ಸಾವು
Four youths die in horrific car-tractor collision
ಜಮಖಂಡಿ 03: ತಾಲೂಕಿನ ಸಿದ್ದಾಪೂರ ಗ್ರಾಮದ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ಹೋಗುತ್ತಿರುವ ಕಬ್ಬಿನ ಟ್ರ್ಯಾಕ್ಟರ್‌ಗೆ ಹಿಂಬದಿಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಜನ ಯುವಕರು ತಡರಾತ್ರಿ ಸಾವನಪ್ಪಿದ ಧಾರುಣ ಘಟನೆ ಸಂಭವಿಸಿದೆ. ತಾಲೂಕಿನ ಸಿದ್ದಾಪೂರ ಗ್ರಾಮದ ನಾಲ್ಕು ಜನ ಯುವಕರಾದ ವಿಶ್ವನಾಥ ಕುಂಬಾರ(17), ಪ್ರವೀಣ ಶೇಡಬಾಳ(22), ಗಣೇಶ ಅಳ್ಳಿಮಟ್ಟಿ( 20),
ಪ್ರಜ್ವಲ್ ಶೇಡಬಾಳ(17) ಸಾವನಪ್ಪಿದ ದುರ್ದೈವಿಗಳು.
ಸಿದ್ದಾಪೂರ ಗ್ರಾಮದಿಂದ ನಾಲ್ಕು ಜನ ಸ್ನೇಹಿತರು ಸೇರಿಕೊಂಡು ತಡರಾತ್ರಿ ಶಿರೋಳ ಗ್ರಾಮದ ಕಾಡಸಿದ್ದೇಶ್ವರ ದೇವರ ಜಾತ್ರೆಗೆ ಹೋಗುತ್ತಿರುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೋಲಿಸ್‌ರು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.
ನಾಲ್ಕು ಜನ ಯುವಕರ ಶವಗಳನ್ನು ಜಮಖಂಡಿ ಸರಕಾರಿ ಉಪವಿಭಾಗದ ಆಸ್ಪತ್ರೆಗೆ ಶವ ಪರೀಕ್ಷೆಗೆ ರವಾನಿಸಲಾಗಿದೆ. ಸರಕಾರಿ ಉಪವಿಭಾಗ ಆಸ್ಪತ್ರೆಗೆ ಜಿಲ್ಲಾ ಎಸ್ ಪಿ. ಸಿದ್ಧಾರ್ಥ ಗೋಯಲ್ ಅವರು ಭೇಟಿ ನೀಡಿ. ತನಿಖೆಯನ್ನು ಮುಂದುವರಿಸಿದ್ದಾರೆ. ಮಾಜಿ ಶಾಸಕ ಆನಂದ ನ್ಯಾಮಗೌಡ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಸಿದ್ದಾಪೂರದಲ್ಲಿ ನಾಲ್ಕು ಜನ ಯುವಕರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಡೀ ಗ್ರಾಮವೇ ನಿರವ ಮೌನ ಆವರಿಸಿದೆ. ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟುವಂತೆ ಇತ್ತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 