ಎಸ್.ಜಿ.ಬಿ.ಐ.ಟಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಬೃಹತ ರಕ್ತದಾನ ಶಿಬಿರ
ಬೆಳಗಾವಿ 05: ಬೆಳಗಾವಿಯ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ಬೆಳಗಾವಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ ಆಸ್ಪತ್ರೆ, ಬೆಳಗಾವಿ ಇವರ ಸಹಯೋಗದಲ್ಲಿ ದಿ. 5ರಂದು ಬೃಹತ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಶಿಬಿರವನ್ನು ನಾಗನೂರು ರುದ್ರಾಕ್ಷಿಮಠ ಬೆಳಗಾವಿಯ ಡಾ ಅಲ್ಲಮಪ್ರಭು ಅವರ ಕೃಪಾಶೀರ್ವಾದದೊಂದಿಗೆ ಎಸ್.ಜಿ.ಬಿ.ಐ.ಟಿ ಯ ಗೌರವಾನ್ವಿತ ಅಧ್ಯಕ್ಷರಾದ ಡಾ. ಎಫ್ ವಿ ಮಾನ್ವಿ ಅವರು ಗಿಡಕ್ಕೆ ನೀರೆರೆಯುವ ಮೂಲಕ, ಶಿಬಿರಾರ್ಥಿಗಳಿಗೆ ಹಣ್ಣುಗಳನ್ನ ಹಂಚುವುದರ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿದರು. ಪ್ರಾಂಶುಪಾಲ ಡಾ. ಬಿ. ಆರ್. ಪಟಗುಂದಿ, ವಿಭಾಗ ಮುಖ್ಯಸ್ಥರು, ಬೆಳಗಾವಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ ಆಸ್ಪತ್ರೆಯ ಡಾ. ರವೀಂದ್ರ ಪಾಟೀಲ ಅವರು ಉಪಸ್ಥಿತರಿದ್ದರು.
ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯಸ್ಥ ಪ್ರೊ. ಮಂಜುನಾಥ ಶರಣಪ್ಪನವರ ಅವರು ಶಿಬಿರವನ್ನು ಆಯೋಜಿಸಿ ಮೇಲ್ವಿಚಾರಣೆ ವಹಿಸಿದ್ದರು. ಶಿಬಿರದಲ್ಲಿ ಒಟ್ಟು ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ
ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನೊಳಗೊಂಡಂತೆ 200ಕ್ಕೂ ಹೆಚ್ಚು ಜನ ರಕ್ತದಾನ ಮಾಡುವುದರ ಜೊತೆಗೆ 300ಕ್ಕೂ ಹೆಚ್ಚು ಜನ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿದರು.
ಶಿಬಿರದ ಕೊನೆಯಲ್ಲಿ ಬೆಳಗಾವಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ ಆಸ್ಪತ್ರೆಯ ಡಾ. ರವೀಂದ್ರ ಪಾಟೀಲ ಅವರು 2025ನೆಯ ಇಸವಿಯಲ್ಲಿ ಇಲ್ಲಿಯವರೆಗಿನ ಅತ್ಯಂತ ಯಶಸ್ವಿ ಹಾಗೂ ಬೃಹತ್ ಪ್ರಮಾಣದ ರಕ್ತದಾನ ಶಿಬಿರ ಇದಾಗಿತ್ತು ಎಂಬ ಪ್ರಶಂಶನೀಯ, ಕೃತಜ್ಞತಾ ಭಾವದ ಮೆಚ್ಚುಗೆ ವ್ಯಕ್ತಪಡಿಸಿ ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಗೆ ಹೃದಯಪೂರ್ವಕ ಧನ್ಯವಾದಗಳನ್ನ ಸಮರ್ಿಸಿದರು.