ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣಾ ಶಿಬಿರ
Free eye check-up camp for differently-abled children
ವಿಜಯಪುರ, 24: 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಶಾಲಾಕ್ಯ ತಂತ್ರ ವಿಭಾಗದ ವತಿಯಿಂದ ಸಮನ್ವಯ ಶಾಲೆಯಲ್ಲಿ ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಸೋಮವಾರ ಆಯೋಜಿಸಲಾಗಿತ್ತು.
ಶಿಬಿರದಲ್ಲಿ ಶಾಲೆಯ 35ಕ್ಕೂ ಹೆಚ್ಚು ವಿದ್ಯಾರ್ಥಿಗಳ ಕಣ್ಣು, ಕಿವಿ, ಮೂಗು ಹಾಗೂ ಗಂಟಲಿನ ತಪಾಸಣೆ ನಡೆಸಲಾಯಿತು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅಗತ್ಯ ತಪಾಸಣೆ ಕೈಗೊಂಡು, ಕಣ್ಣಿನ ಆರೈಕೆ, ಸ್ವಚ್ಛತೆ ಹಾಗೂ ನೇತ್ರ ಆರೋಗ್ಯದ ಕುರಿತು ಸೂಕ್ತ ಆರೋಗ್ಯ ಶಿಕ್ಷಣ ಮತ್ತು ಮಾರ್ಗದರ್ಶನ ನೀಡಲಾಯಿತು.
ವಿಶೇಷ ಅಗತ್ಯವುಳ್ಳ ಮಕ್ಕಳಲ್ಲಿ ಕಣ್ಣಿನ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ, ಅಗತ್ಯವಿದ್ದಲ್ಲಿ ಸೂಕ್ತ ವೈದ್ಯಕೀಯ ಸಲಹೆ ಹಾಗೂ ಮುಂದಿನ ಚಿಕಿತ್ಸಾ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಶಾಲಾಕ್ಯ ತಂತ್ರ ವಿಭಾಗದ ಡಾ. ಗಂಗಾಧರ ತಿಮ್ಮಾಪುರ, ಡಾ. ರಾಜೇಶಾಬ್ ಕಬಾಡೆ ಹಾಗೂ ಡಾ. ನಂದಿತಾ ಕುಲಕರ್ಣಿ ಅವರು ಭಾಗವಹಿಸಿ ವಿದ್ಯಾರ್ಥಿಗಳ ನೇತ್ರ ತಪಾಸಣೆ ನಡೆಸಿದರು. ಡಾ. ಅಮೃತಾ, ಡಾ. ಮಯೂರ ಹಾಗೂ ಡಾ. ವೈಷ್ಣವಿ ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 