ಯಶಸ್ವಿಯಾಗಿ ಜರುಗಿದ ಉಚಿತ ನೇತ್ರ ತಪಾಸಣಾ ಶಿಬಿರ
Free eye check-up camp successfully held
ವಿಜಯಪುರ,ಜ.28: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2026 ಅಂಗವಾಗಿ ಹಮ್ಮಿಕೊಂಡ ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಸಂತೋಷಗೌಡ ಬಿ.ಪಾಟೀಲ, ದತ್ತಾತ್ರೇಯ ಹೊಸಮಠ, ಅಲ್-ಅಮೀನ್ ವೈದ್ಯಕೀಯ ಕಾಲೇಜಿನ ಡಾ.ಆಶ್ಪಾಕ ಅಹ್ಮದ ಕಕ್ಕೇರಿ, ಹಿರಿಯ ಮೋಟಾರು ವಾಹನ ನೀರೀಕ್ಷಕ ಗೋವಿಂದ ಎಲ್.ರಾಠೋಡ ಭಾಗವಹಿಸಿದ್ದರು. ಈ ಶಿಬಿರದಲ್ಲಿ 101 ಸಾರ್ವಜನಿಕರಿಗೆ ಉಚಿತ ನೇತ್ರ ತಪಾಸಣೆ ನಡೆಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 