ಶ್ರೀನಿವಾಸ ಮಾನೆ ಅವರ 50 ನೇ ಜನ್ಮದಿನದ ಅಂಗವಾಗಿ ಉಚಿತ ನೇತ್ರ ತಪಾಸಣೆ
ಹಾನಗಲ್:ಶಾಸಕ ಶ್ರೀನಿವಾಸ ಮಾನೆ ಅವರ 50 ನೇ ಜನ್ಮ ವರ್ಷಾಚರಣೆ ಅಂಗವಾಗಿ ತಾಲೂಕಿನ ಅಕ್ಕಿಆಲೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹುಬ್ಬಳ್ಳಿಯ ಜಯಪ್ರಿಯ ಕಣ್ಣಿನ ಆಸ್ಪತ್ರೆ ಹಾಗೂ ಟೀಂ ಆಪತ್ಬಾಂಧವ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಲಾಗಿತು.
ಶಿಬಿರದಲ್ಲಿ 150 ಕ್ಕೂ ಹೆಚ್ಚು ಜನರ ನೇತ್ರ ತಪಾಸಣೆ ಕೈಗೊಂಡು ಈ ಪೈಕಿ 55 ಜನರನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು. ಶಿಬಿರ ಉದ್ಘಾಟಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ ಮಾತನಾಡಿ, ಶಾಸಕ ಶ್ರೀನಿವಾಸ ಮಾನೆ ಅವರ 50 ನೇ ಜನ್ಮ ವರ್ಷಾಚರಣೆ ನೆಪದಲ್ಲಿ ವರ್ಷವೀಡೀ ಸಾಕಷ್ಟು ಸಮಾಜೋಪಯೋಗಿ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ, ಬೃಹತ್ ಆರೋಗ್ಯ ಶಿಬಿರ, ನೇತ್ರದಾನ, ದೇಹದಾನ, ಬೃಹತ್ ಉದ್ಯೋಗ ಮೇಳ, ಕೆರೆಗಳ ಪುನಶ್ಚೇತನ ಹೀಗೆ ನಾನಾ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಇತ್ತೀಚಿಗೆ ಹಾನಗಲ್ ನಗರದಲ್ಲಿ ನಡೆದ ಉದ್ಯೋಗ ಮೇಳದಲ್ಲಿ 1196 ಯುವಕ, ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿದ್ದು ಇತಿಹಾಸ ಎಂದರು.
ಗ್ರಾಪಂ ಅಧ್ಯಕ್ಷ ಮಕ್ಬೂಲ್‌ಅಹ್ಮದ್ ರುಸ್ತುಂಖಾನವರ, ಸದಸ್ಯರಾದ ಇನಾಯತ್ ಪಠಾಣ, ಫಕ್ಕೀರಗೌಡ ಪಾಟೀಲ ಇಂದೂಧರ ಸಾಲಿಮಠ, ರಜಿಯಾಬೇಗಂ ಹಿತ್ತಲಮನಿ, ಅಲ್ಪಸಂಖ್ಯಾತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತ್ತಾರಸಾಬ ಅರಳೇಶ್ವರ, ವೈದ್ಯಾಧಿಕಾರಿ ಡಾ.ಗಗನ ಮಾಳೋದೆ, ಜಯಪ್ರಿಯಾ ಕಣ್ಣಿನ ಆಸ್ಪತ್ರೆಯ ಮಹೇಶ ಕುಲಕರ್ಣಿ ಸೇರಿದಂತೆ ಅನೇಕರಿದ್ದರು.