ಬಡವರ ಅನುಕೂಲಕ್ಕಾಗಿ ಉಚಿತ ಶವಸಂಸ್ಕಾರ ವಾಹನ ಸೇವೆ ಲೋಕಾರೆ್ಣ
Free funeral transport service launched for the benefit of the poor
ಕೊಪ್ಪಳ 4: ನಗರದ ಬಡವರು, ನಿರ್ಗತಿಕರು ಹಾಗೂ ಖಬ್ರಸ್ತಾನ್ ದೂರವಿರುವ ಕಾಲೊನಿಗಳ ನಿವಾಸಿಗಳ ಅನುಕೂಲಕ್ಕಾಗಿ ಅಲ್ ಅಮೀನ್ ಬೈತುಲ್ ಮಾಲ್ ಕಮಿಟಿ ವತಿಯಿಂದ ಉಚಿತ ಶವಸಂಸ್ಕಾರ ವಾಹನವನ್ನು ಸಾರ್ವಜನಿಕ ಸೇವೆಗೆ ಶುಕ್ರವಾರ ಲೋಕಾರೆ್ಣ ಮಾಡಲಾಯಿತು. ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ಧರ್ಮಗುರುಗಳ ಪವಿತ್ರ ಹಸ್ತದಿಂದ ವಾಹನವನ್ನು ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಸಮರ್ಿಸಲಾಯಿತು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು ಮಾತನಾಡಿ, ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ವಾಹನ ವ್ಯವಸ್ಥೆ ಕಲ್ಪಿಸುವುದು ಕಷ್ಟಕರವಾಗಿತ್ತು. ಈ ಅಗತ್ಯವನ್ನು ಮನಗಂಡು ಅಲ್ ಅಮೀನ್ ಬೈತುಲ್ ಮಾಲ್ ಕಮಿಟಿ ಉಚಿತ ಶವಸಂಸ್ಕಾರ ವಾಹನ ಸೇವೆಯನ್ನು ಆರಂಭಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು.
ಕಷ್ಟದ ಸಮಯದಲ್ಲಿ ಅಗತ್ಯವಿರುವ ಕುಟುಂಬಗಳಿಗೆ ಈ ವಾಹನ ಉಚಿತವಾಗಿ ಸೇವೆ ನೀಡಲಿದ್ದು, ಸಮಾಜಮುಖಿ ಕಾರ್ಯಗಳಿಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಕಮಿಟಿಯ ಪದಾಧಿಕಾರಿಗಳು, ಉಲಮಾಗಳು, ಸಮಾಜದ ಮುಖಂಡರು ಹಾಗೂ ಯುವಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ವಾಹನ ಸೇವೆಯ ಯಶಸ್ಸಿಗೆ ಶುಭ ಹಾರೈಸಲಾಯಿತು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 