ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ”
Free health and eye check-up camp
ಧಾರವಾಡ 21: ಆರೋಗ್ಯವೇ ಭಾಗ್ಯ ಎನ್ನುವಂತೆ ಮಾನಸಿಕ ಆರೋಗ್ಯದಂತೆ ದೈಹಿಕ ಆರೋಗ್ಯವು ಬಹಳ ಮುಖ್ಯವಾಗಿದೆ. ಕತ್ತಲಿನಿಂದ ಬೆಳಕಿನ ಕಡೆಗೆ ನಮ್ಮನ್ನು ಕರೆದೊಯ್ಯುವ ಕಣ್ಣು ದೇಹದ ಭಾಗಗಳಲ್ಲಿ ಮುಖ್ಯವಾದುದು. ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನಿಟ್ಟುಕೊಂಡು ಅಭ್ಯಾಸದಲ್ಲಿ ತೊಡಗಿದಾಗ ಯಶಸ್ಸು ಸುಲಭವಾಗಿ ದೊರೆಯುತ್ತದೆ ಎಂದು ಸಾಯಿ ಕಾಲೇಜಿನ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ವೀಣಾ ಬಿರಾದಾರ ಇವರು ಸಾಯಿ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಧಾರವಾಡ, ಹೊಂಬೆಳಕು ಪ್ರತಿಷ್ಠಾನ ಧಾರವಾಡ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಹೊಂಬೆಳಕು ಪ್ರತಿಷ್ಠಾನ, ತಾಲೂಕು ಆರೋಗ್ಯ ಕೇಂದ್ರ, ಧಾರವಾಡ ಮತ್ತು ಹರೀಶ ಮೆಡಿಲ್ಯಾಬ್ ಹಾಗೂ ಡಾ ಅಗರವಾಲ್ಸ್ ಕಣ್ಣಿನ ಆಸ್ಪತ್ರೆ, ಧಾರವಾಡ ಮತ್ತು ಗ್ರಾಮ ಪಂಚಾಯತ್, ದೇವರಹುಬ್ಬಳ್ಳಿ ಇವರ ಸಹಯೋಗದೊಂದಿಗೆ ಆಯೋಜಿಸಿದ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ”ಸಮಾರಂಭದಲ್ಲಿ ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ದೇವರಹುಬ್ಬಳ್ಳಿಯ ಸರಕಾರಿ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತುನೇತ್ರ ತಪಾಸಣಾ ಶಿಬಿರದಲ್ಲಿ ಸುಮಾರು 100 ಕ್ಕು ಹೆಚ್ಚು ವಿದ್ಯಾರ್ಥಿಗಳು ಈ ಶಿಬಿರದ ಸದುಪಯೋಗ ಪಡೆದುಕೊಂಡರು.
ಹಾಗೂ “ಉಚಿತ ಆರೋಗ್ಯ ಶಿಬಿರದಲ್ಲಿ 300ಕ್ಕು ಹೆಚ್ಚು ಗ್ರಾಮಸ್ತರಿಗೆ ಬಿಪಿ, ಶುಗರ, ನೇತ್ರ ತಪಾಸಣೆ ಮತ್ತು ಇಸಿಜಿ ತಪಾಸಣೆಯಮ್ಮು ಉಚಿತವಾಗಿ ಮಾಡಿಸಲಾಯಿತು ದಿವ್ಯ ಸಾನಿಧ್ಯವನ್ನು . ಸಿದ್ಧ ಶಿವಯೋಗಿಗಳು ಸಿದ್ಧಾಶ್ರಮ, ದೇವರಹುಬ್ಬಳ್ಳಿ. ಇವರು ಮಾತನಾಡಿ ಈ “ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ” ಆಯೋಜಿಸದ್ದು ನಮ್ಮ ಗ್ರಾಮದ ಜನರಿಗೆ ತುಂಬಾ ಸಹಾಯವಾಗಿದೆ. ಈ ಕಾರ್ಯಕ್ರಮ ಆಯೋಜಿಸಿದ ಡಾ. ವೀಣಾ ಬಿರಾದಾರ ರವರಿಗೆ ಅಭಿನಂದನೆಗಳು. ಇದೇ ರೀತಿ ಇನ್ನು ಹತ್ತು ಹಲವಾರು ಕಾರ್ಯಕ್ರಮ ಆಯೋಜಿಸಲಿ ಎಂದು ಹಾರೈಸುತ್ತೇವೆ. ಗ್ರಾಮೀಣ ಭಾಗದಲ್ಲಿ ಜನರಿಗೆ ಈ ತರಹದ ಸವಲತ್ತು ಸಹಕಾರ ಸಹಾಯ ಇನ್ನಷ್ಟು ದೊರಕಲಿ ಎಂದು ನುಡಿದರು.
ಬಸವರಾಜ ಹೊಂಗಲ್ ಹಿರಿಯ ಪತ್ರಕರ್ತರು ಉದಯವಾಣಿ, ಧಾರವಾಡ, ಇವರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ” ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರಿಂದ ಹೆಚ್ಚು ಉಪಯೋಗವಾಗುತ್ತದೆ. ಡಾ. ವೀಣಾ ಬಿರಾದಾರ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಅಂತವರ ಮಾರ್ಗದರ್ಶನ ಪಡೆಯುವುದರಿಂದ ವಿದ್ಯಾರ್ಥಿಗಳಿಗೆ ಯಶಸ್ಸನ್ನು ಸಾಧಿಸಲು ಸಹಕಾರಿಯಾಗುವುದು ಎಂದು ನುಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಮಂಜುನಾಥ ಶೆಲ್ಲಿಕೇರಿ ಅಧ್ಯಕ್ಷರು, ಗ್ರಾಮ ಪಂಚಾಯತ್, ದೇವರಹುಬ್ಬಳ್ಳಿ. ರೇಖಾ ಬಾ. ಬೇಲೂರು ಉಪಾಧ್ಯಕ್ಷರು, ಗ್ರಾಮ ಪಂಚಾಯತ್, ದೇವರಹುಬ್ಬಳ್ಳಿ. ವೀರಭದ್ರಾ್ಪ ಗಣಾಚಾರಿ ಪಿ.ಡಿ.ಓ., ಗ್ರಾಮ ಪಂಚಾಯತ್, ದೇವರಹುಬ್ಬಳ್ಳಿ ಆರತಿ ಹಿರೇಮಠ ಸದಸ್ಯರು ಗ್ರಾಮ ಪಂಚಾಯತ್, ದೇವರಹುಬ್ಬಳ್ಳಿ. ಭೀಮಪ್ಪ ಬಳಿಗೇರ ಕಾರ್ಯದರ್ಶಿಗಳು, ಗ್ರಾಮ ಪಂಚಾಯತ್, ದೇವರಹುಬ್ಬಳ್ಳಿ. ಶಾಲೆಯ ಮುಖ್ಯೋಪಾಧ್ಯಾಯರಾದ ನಾಜೀಯಾ ಮುಧೋಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ, ಡಾ. ಆರತಿ ಹಾಲಗಡಗಿ ವೈದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಮುಗದ. ವೈದ್ಯರು ಮತ್ತು ಸಿಬ್ಬಂದಿ ವರ್ಗ, ಗ್ರಾಮದ ಹಿರಿಯರು ಮತ್ತು ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ ಬಾಪು ಮೊರಂಕರ ನಿರೂಪಿಸಿದರು,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 