ಉಚಿತ ಜೀನ್ಸ್ ಟೈಲರಿಂಗ್ ತರಬೇತಿಯ ಕಾರ್ಯಕ್ರಮ
ಹೊಸಪೇಟೆ 10: ಇಂದು ವಿಜಯನಗರ ಕ್ಷೇತ್ರದ ಹೊಸಪೇಟೆಯ ಅಂಜುಮನ್ ಶಾದಿ ಮಹಲ್ ನಲ್ಲಿ ಉಚಿತ ಜೀನ್ಸ್ ಟೈಲರಿಂಗ್ ತರಬೇತಿಯ ಕಾರ್ಯಕ್ರಮವನ್ನು ಹಮ್ಮಿಕೊಂಡು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಹೊಸಪೇಟೆ ಅಂಜುಮನ್ ಖಿದ್ಮತೆ ಇಸ್ಲಾಂ ಸಮಿತಿಯ ಅಧ್ಯಕ್ಷರು ಹಾಗೂ ಹೊಸಪೇಟೆಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್. ಎನ್ ಮಹಮ್ಮದ್ ಇಮಾಮ್ ನಿಯಾಜಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಮಸ್ತ ವಿಜಯ ನಗರ ಕ್ಷೇತ್ರದ ಮಹಿಳೆಯರನ್ನು ಸ್ವಾವಲಂಬಿಯನ್ನಾಗಿಸಲು ಉಚಿತ ಜೀನ್ಸ್ ಹೊಲಿಗೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ನಗರದ ಎಲ್ಲಾ ಸಮಾಜದ ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಹಾಗೂ ಉತ್ತಮ ತರಬೇತಿಯನ್ನು ಪಡೆದವರಿಗೆ ಉದ್ಯೋಗ ನೀಡುವುದು ನಮ್ಮ ಧ್ಯೇಯ ಉದ್ದೇಶವಾಗಿರುತ್ತದೆ. ಹಾಗೂ ಅವರ ಕೌಶಲ್ಯ ಇನ್ನು ಹೆಚ್ಚಿದಲ್ಲಿ ಅವರು ಮನೆಯಿಂದಲೇ ಬಟ್ಟೆಗಳಿಗೆ ಹೊಲಿಗೆ ಹಾಕುವುದರ ಮೂಲಕ ಹಣವನ್ನು 10000 ರಂದ 15000 ಸಂಪಾದಿಸಬಹುದು, ಈ ಮೂಲಕ ಸ್ವಾವಲಂಬಿ ಜೀವನವನ್ನು ಸಾಗಿಸಬಹುದಾಗಿದೆ ಎಂದರು. ಮುಂದಿನ ದಿನಗಳಲ್ಲಿ ಒಟ್ಟು 1000 ಜನ ಹೆಣ್ಣು ಮಕ್ಕಳಿಗೆ ಉದ್ಯೋಗ ನೀಡುವ ಉದ್ದೇಶವಾಗಿದ್ದು ಸಾರ್ವಜನಿಕರ ಸಹಕಾರ ಅತ್ಯಗತವಾಗಿರುತ್ತದೆ ಎಂದರು. ಈ ಒಂದು ಸಂದರ್ಭದಲ್ಲಿ ಅಂಜುಮನ್ ಕಮಿಟಿ ಉಪಾಧ್ಯಕ್ಷರಾದ ಎಮ್.ಎಮ್. ಫೈರೋಜ್ ಖಾನ್, ಕಾರ್ಯದರ್ಶಿಯಾದ ಅಬೂಬಕ್ಕರ್ ಅಶ್ರಫಿ, ಖಜಾಂಚಿಯಾದ ಅನ್ಸರ್ ಭಾಷ, ಹಾಗೂ ಸಮಾಜದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.