ಉಚಿತ ಮೊಬೈಲ್ ರಿಪೇರಿ ಸೇವಾ ಶಿಬಿರ
Free mobile repair service camp
ರುಡ್‌ಸೆಟ್ ಸಂಸ್ಥೆ, ಧಾರವಾಡದಲ್ಲಿ ಮೊಬೈಲ್ ರಿಪೇರಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳಿಂದ ಧಾರವಾಡದ ಜೆಎಸ್‌ಎಸ್ ಕಾಲೇಜು ಆವರಣದಲ್ಲಿ “ಉಚಿತ ಮೊಬೈಲ್ ರಿಪೇರಿ ಸೇವಾ ಶಿಬಿರ ” ವನ್ನು ದಿ. 22ರಂದು ಧಾರವಾಡದ ಜೆ.ಎಸ್.ಎಸ್ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಅಜಿತಪ್ರಸಾದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಶಿಬಿರದ ಉದ್ಘಾಟನೆ ಮಾಡಿದ ಅವರು ಮೊಬೈಲ್ ಕ್ಷೇತ್ರಕ್ಕೆ ತುಂಬಾ ಬೇಡಿಕೆಯಿದ್ದು ಇದರ ಸದುಪಯೋಗ ಮಾಡಿಕೊಳ್ಳಿ ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು. ಜೊತೆಗೆ ಈ ಶಿಬಿರವನ್ನು ಆಯೋಜಿಸಿದ ರುಡ್‌ಸೆಟ್ ಸಂಸ್ಥೆಯ ಕಾರ್ಯವನ್ನು ಅವರು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಅರಿಹಂತ ಪ್ರಸಾದ್, ಮಹಾವೀರ ಉಪಾಧ್ಯೆ, ಸಂಜಯ್ ಕಪಟ್ಕರ್, ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ತರಬೇತಿದಾರರು ಭಾಗವಹಿಸಿದ್ದರು. ಈ ಶಿಬಿರದಲ್ಲಿ ನೂರಾರು ಗ್ರಾಹಕರು ತಮ್ಮ ಮೊಬೈಲ್ ಸೆಟ್‌ಗಳನ್ನು ಉಚಿತವಾಗಿ ರಿಪೇರಿ ಮಾಡಿಸಿದರು. ಈ ಶಿಬಿರವು ಗ್ರಾಹಕರ ಸಂತೃಪ್ತಿಗೆ ಕಾರಣವಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 