ಎಲ್ಲರಿಗೂ ಸ್ವಾತಂತ್ರ್ಯ ಮತ್ತು ಸಮಾನತೆ ನ್ಯಾಯ ದೊರಕಲಿ: ನ್ಯಾ.ಕೆ.ಜಿ.ಶಾಂತಿ

Freedom and equality for all: Nya.K.G.Shanti

ಎಲ್ಲರಿಗೂ ಸ್ವಾತಂತ್ರ್ಯ ಮತ್ತು ಸಮಾನತೆ ನ್ಯಾಯ ದೊರಕಲಿ: ನ್ಯಾ.ಕೆ.ಜಿ.ಶಾಂತಿ

ಬಳ್ಳಾರಿ 26: ಭಾರತವು ಪ್ರಜಾಪ್ರಭುತ್ವ ಮತ್ತು ಗಣರಾಜ್ಯವಾಗಲು ಹಲವು ಮಹಾನ್ ಹೋರಾಟಗಾರರ ಶ್ರಮವಿದೆ. ಎಲ್ಲರಿಗೂ ಸ್ವಾತಂತ್ರ್ಯ ಮತ್ತು ಸಮಾನತೆ ನ್ಯಾಯ ದೊರಕಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಹೇಳಿದರು.ನಗರದ ಹೊಸ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ, ರಾಷ್ಟೊಪಿತ ಮಹಾತ್ಮಾ ಗಾಂಧೀಜಿ ಮತ್ತು ಡಾ.ಬಿ.ಆರ್‌. ಅಂಬೇಡ್ಕರ್ ರವರ ಭಾವಚಿತ್ರಗಳಿಗೆ ಪುಷ್ಪರ್ಚಾನೆ ಸಲ್ಲಿಸಿ ಅವರು ಮಾತನಾಡಿದರು.ವಿಶ್ವದ ಅತ್ಯಂತ ಬೃಹತ್ ಲಿಖಿತ ಸಂವಿಧಾನವು ಭಾರತ ಸಂವಿಧಾನವಾಗಿದೆ. ಸಾಮಾಜಿಕ ನ್ಯಾಯ, ಸಮಾನತೆಯ ನ್ಯಾಯ, ಭಾತೃತ್ವ ಮತ್ತು ್ಠನ್ಯಾಯವನ್ನು ಪ್ರಜೆಗಳಿಗೆ ಕಲ್ಪಿಸಿದೆ ಎಂದರು.ಸಂವಿಧಾನದ ಮೂಲಭೂತ ಹಕ್ಕುಗಳಿಂದ ದೇಶದ ನಾಯಕನನ್ನು ಆಯ್ಕೆ ಮಾಡುವ ಅವಕಾಶ ನೀಡಿದೆ. ಅದನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ ಆಗಿದೆ ಎಂದರು.ನ್ಯಾಯಾಧೀಶರು, ವಕೀಲರು, ಸಿಬ್ಬಂದಿಗಳು ಯಾವುದೇ ತಾರತಮ್ಯ, ಜಾತಿ-ಭೇದವಿಲ್ಲದೇ ಸರ್ವರಿಗೂ ಸಕಾಲದಲ್ಲಿ ಪ್ರಜೆಗಳಿಗೆ ನ್ಯಾಯ ದೊರಕಿಸಿ ಕೊಡುವ ಜವಾಬ್ದಾರಿ ಅವರ ಮೇಲಿದೆ ಎಂದು ತಿಳಿಸಿದರು.ದೇಶದ ಯುವಜನರು ಮತ್ತು ಪ್ರಜೆಗಳು ಕಾನೂನಿನ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡಬೇಕು. ಭಾರತರತ್ನ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ಸದಾ ಸ್ಮರಿಸಲೇಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು. 

ಕಾರ್ಯಕ್ರಮದಲ್ಲಿ ಪ್ರಧಾನ ಕೌಟುಂಬಿಕ ನ್ಯಾಯಾಧೀಶರಾದ ಸಿದ್ಧಲಿಂಗ ಪ್ರಭು, 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ, ಅಪರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ರಾಘವೇಂದ್ರ ಗೌಡ.ಬಿ.ಜಿ., 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಬಿ.ಜಿ.ಪ್ರಮೋದಾ, 4ನೇ ಅಪರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ವಾಸುದೇವ ರಾಧಕಾಂತ್ ಗುಡಿ, ಪ್ರಿನ್ಸಿಪಲ್ ಹಿರಿಯ ಸಿವಿಲ್ ನ್ಯಾಯಾಧೀಶರಾದ ಇಬ್ರಾಹಿಂ ಮುಜಾವರ್, ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಅಪರ್ಣ, ಎರಡನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ನಸ್ರತ್ ಮುಖ್ತಾರ್ ಅಹ್ಮದ್ ಖಾನ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್‌.ಎನ್‌.ಹೊಸಮನೆ, ಪ್ರಿನ್ಸಿಪಲ್ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಧೀಶರಾದ ಅಮೀತ್ ಘಟ್ಟಿ, 1ನೇ ಅಪರ ಸಿವಿಲ್ ನ್ಯಾಯಾಧೀಶರಾದ ಈರ​‍್ಪ ದವಳೇಶ್ವರ, 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಣ್ಣಹನಮಗೌಡ, 4ನೇ ಅಪರ ಸಿವಿಲ್ ನ್ಯಾಯಾಧೀಶರಾದ ರೂಪ ಚಿನಿವಾರ, 5ನೇ ಅಪರ ಸಿವಿಲ್ ನ್ಯಾಯಾಧೀಶರಾದ ಮುದುಕಪ್ಪ ಒಡನ್ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.