ಜ.15ರಿಂದ–ಜಿರಾಮ್‌ಜಿ’ ಜಾಗೃತಿ ಅಭಿಯಾನ
From Jan. 15 – ‘Jiramji’ awareness campaign
ದಾವಣಗೆರೆ: ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ (ವಿಬಿ–ಜಿರಾಮ್‌ಜಿ) ಯೋಜನೆ ಕುರಿತು ಅರಿವು ಮೂಡಿಸಲು ಜ.15ರಿಂದ ಫೆ.28ರವರೆಗೆ ರಾಜ್ಯವ್ಯಾಪಿ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ತಿಳಿಸಿದರು.
‘ಮನರೇಗಾ’ ಹೆಸರು ಬದಲಿಸಿ ಮಹಾತ್ಮ ಗಾಂಧಿ ಅವರನ್ನು ಅವಮಾನಿಸಲಾಗಿದೆ ಎಂಬುದಾಗಿ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ‘ಜಿರಾಮ್‌ಜಿ’ ಯೋಜನೆ ಕುರಿತ ಸುಳ್ಳು ಆರೋಪಗಳ ವಿರುದ್ಧ ಬಿಜೆಪಿ ಅಭಿಯಾನ ಕೈಗೆತ್ತಿಕೊಂಡಿದೆ. ಮಂಡಲ, ಜಿಲ್ಲಾ ಮಟ್ಟದಲ್ಲಿ ಸಮಾವೇಶ ನಡೆಸಲಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘ರಾಜ್ಯದಲ್ಲಿ ‘ಜಿರಾಮ್‌ಜಿ’ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು. ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನ ಬಿಡುಗಡೆ ಮಾಡಬೇಕು. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ಜನರಿಗೆ ಉದ್ಯೋಗ ಭದ್ರತೆ ಕಲ್ಪಿಸಿದ ಯೋಜನೆಯ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಕಾಂಗ್ರೆಸ್ ಕೈಬಿಡಬೇಕು’ ಎಂದು ಆಗ್ರಹಿಸಿದರು.
‘ಯುಪಿಎ ಸರ್ಕಾರದ ಅವಧಿಯಲ್ಲಿ ರೂಪಿಸಿದ ಶಿಕ್ಷಣ ಮತ್ತು ಆಹಾರ ಹಕ್ಕು ಕಾಯ್ದೆಗಳನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದ್ದು ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ. ಕೇವಲ ಗುಂಡಿ ಅಗೆಯುವ ಮತ್ತು ಗುಂಡಿ ಮುಚ್ಚುವ ಕೆಲಸವಾಗಿದ್ದ ‘ಮನರೇಗಾ’ ಸ್ವರೂಪವನ್ನು ಅಭಿವೃದ್ಧಿಗೆ ಪೂರಕವಾಗಿ ಬದಲಿಸಲಾಗಿದೆ. ಇದನ್ನು ರಾಜಕೀಕರಣಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ’ ಎಂದು ದೂರಿದರು.
‘ಮನರೇಗಾ’ಗೆ 2005ರಲ್ಲಿ ಕಾನೂನು ಚೌಕಟ್ಟು ನೀಡಿ, 2009ರಲ್ಲಿ ಮಹಾತ್ಮ ಗಾಂಧೀಜಿ ಹೆಸರು ಸೇರಿಸಲಾಯಿತು. ಅಭಿವೃದ್ಧಿಗೆ ಪೂರಕವಾಗಿ ಕೆಲ ಬದಲಾವಣೆ ಮಾಡಲಾಗಿದೆ. ಕೆಲಸದ ದಿನಗಳನ್ನು 100ರಿಂದ 125ಕ್ಕೆ ಏರಿಸಲಾಗಿದೆ. ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ. ನಕಲಿ ಜಾಬ್ ಕಾರ್ಡ್, ಹಣ ದುರುಪಯೋಗಕ್ಕೆ ಕಡಿವಾಣ ಬಿದ್ದಿದೆ. ಹಾಜರಾತಿ, ಕಾಮಗಾರಿಯ ಸ್ಥಳ ಖಚಿತತೆಗೆ ತಂತ್ರಜ್ಞಾನದ ನೆರವು ಪಡೆಯಲಾಗಿದೆ’ ಎಂದು ವಿವರಿಸಿದರು.
ಮಾಜಿ ಸಚಿವರಾದ ಎಸ್.ಎ. ರವೀಂದ್ರನಾಥ್, ಎಂ.ಪಿ. ರೇಣುಕಾಚಾರ್ಯ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್, ಮಾಜಿ ಶಾಸಕರಾದ ಎಸ್.ವಿ. ರಾಮಚಂದ್ರಪ್ಪ, ಬಸವರಾಜ ನಾಯ್ಕ, ಮಾಜಿ ಮೇಯರ್ ಬಿ.ಜಿ. ಅಜಯ್ಕುಮಾರ್, ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ಮುಖಂಡರಾದ ಕೋಳೆನಹಳ್ಳಿ ಬಿ.ಎಂ. ಸತೀಶ್, ಧನಂಜಯ ಕಡ್ಲೇಬಾಳು, ಚಂದ್ರಶೇಖರ್ ಪೂಜಾರ್, ಶಿವನಹಳ್ಳಿ ರಮೇಶ್ ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 