ಡಿ. 13 ರಿಂದ 15 ವರೆಗೆ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿಫಲಪುಷ್ಪ ಪ್ರದರ್ಶನ ಮತ್ತು ಸರಸ ಮೇಳ ಆಯೋಜನೆ
Fruit and flower exhibition and Sarasa Mela organized at Indira Glass House, Hubli from December 13
ಧಾರವಾಡ 10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಮಹಾನಗರ ಪಾಲಿಕೆ, ಕೃಷಿ ಇಲಾಖೆ, ಮೀನುಗಾರಿಕ ಇಲಾಖೆ, ಹಾನ್ ಕಾಮ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲಾಭಿವೃದ್ಧಿ ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ಉದನವನ ಹಾಗೂ ಫಲಪುಷ್ಪ ಪ್ರದರ್ಶನ ಸಮಿತಿ, ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಧಾರವಾಡ ಜಿಲ್ಲೆಯಲ್ಲಿ 2025-26 ನೇ ಸಾಲಿನ ಫಲಪುಷ್ಪ ಪ್ರದರ್ಶನ ಮತ್ತು ಸರಸ ಮೇಳವನ್ನು ಡಿಸೆಂಬರ್ 13 ರಿಂದ ಡಿಸೆಂಬರ್ 15, 2025 ರವರೆಗೆ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಹೇಳಿದರು.
ಅವರು ಇಂದು (ಡಿ.10) ಮಧ್ಯಾಹ್ನ ಪ್ರಸಕ್ತ ವರ್ಷದ ಫಲಪುಷ್ಪ ಪ್ರದರ್ಶನ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮತ್ತು ಉದ್ಯಮ ಇಲಾಖೆಯ ಸರಸ ಮೇಳ ಆಯೋಜನೆ ಕುರಿತು ಜಿಲ್ಲಾ ಪಂಚಾಯತ ಕಾನ್ಫರೆನ್ಸ್ ಹಾಲ್‌ದಲ್ಲಿ ಪತ್ರಿಕಾಗೋಷ್ಠಿಯನ್ನು ಜರುಗಿಸಿ, ಮಾತನಾಡಿದರು.
ಜಿಲ್ಲಾ ಪಂಚಾಯತ್ ಇಲಾಖೆ ವತಿಯಿಂದ 50 ರಿಂದ 60 ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯ ಸ್ವ-ಸಹಾಯ ಸಂಘದ ಮಹಿಳೆಯರು ವಿವಿಧ ವಸ್ತುಗಳ ಖಾದ್ಯಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುವರು ಇದರಿಂದ ಸ್ವ-ಸಹಾಯ ಸಂಘದ ಮಹಿಳೆಯರ ಆರ್ಥಿಕಮಟ್ಟ ಸುಧಾರಣೆಗೆ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.
ರೈತರಿಗೆ ಹಾಗೂ ಸಾರ್ವಜನಿಕರಿಗೆ, ತೋಟಗಾರಿಕೆ ಹಾಗೂ ಕೃಷಿಯಲ್ಲಿನ ಹೊಸ ತಂತ್ರಜ್ಞಾನ ಹಾಗೂ ಆವಿಷ್ಕಾರಗಳನ್ನು ಮಳಿಗೆಗಳಲ್ಲಿ ಪ್ರಾತ್ಯಕ್ಷಿಕೆಗಳ ಮೂಲಕ ಪ್ರದರ್ಶಿಸುವುದು ಮತ್ತು ವಿವಿಧ ತೋಟಗಾರಿಕೆ ಬೆಳೆಗಳ ಹೊಸ ತಳಿಗಳ ಪರಿಚಯ ಹಾಗೂ ಉದ್ಯಾನವನ ಪ್ರಿಯರಿಗೆ ವಿವಿಧ ಜಾತಿಯ ಹೂವಿನ ಹಾಗೂ ಅಲಂಕಾರಿಕ ಗಿಡಗಳ ಪರಿಚಯ, ಕೈ ತೋಟ ಹಾಗೂ ಮೇಲ್ಚಾವಣಿ ತೋಟ ಮಾಡುವುದರ ಕುರಿತು ಮಾಹಿತಿಯನ್ನು ಸಹ ಈ ಸಂದರ್ಭದಲ್ಲಿ ನೀಡಲಾಗುತ್ತದೆ ಎಂದು ಹೇಳಿದರು.
ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೆ. ಸಿ. ಭದ್ರಣ್ಣವರ ಅವರು ಮಾತನಾಡಿ, ಫಲಪುಷ್ಪ ಪ್ರದರ್ಶನದಲ್ಲಿ ಕೇಂದ್ರ ಬಿಂದುವಾಗಿ ಹೂವಿನಿಂದ ಅಲಂಕೃತವಾದ ಶ್ರೀ ಸಿದ್ಧಾರೂಡರ ಕೈಲಾಸ ಮಂಟಪ, ಸಾಲುಮರದ ತಿಮ್ಮಕ್ಕನ ಕಲಾಕೃತಿ, ಸೆಲ್ಪಿ ಪಾಯಿಂಟ್ ಕಲಾಕೃತಿ, ಹಾಗೂ ವಿವಿಧ 15 ರಿಂದ 20 ಜಾತಿಯ ವಾರ್ಷಿಕ ಹೂವಿನ ತಳಿಗಳನ್ನು ಗುಚ್ಛಗಳ ಮಾದರಿಯಲ್ಲಿ ಮಾಡಲಾಗುತ್ತದೆ. ಲ್ಯಾಂಡ್ ಸ್ಕೇಪ್ ಡಿಸೈನ್ ನಿರ್ಮಾಣ, ತರಕಾರಿ ಮತ್ತು ಹಣ್ಣುಗಳಲ್ಲಿ ವಿವಿಧ ಕಲಾಕೃತಿಗಳ ಕೆತ್ತನೆ (ಈಡಿಣ ್ಘ ಗಿಜರಜಣಚಿಛಟಜ ಛಿಚಿಡಿತಟಿರ), ವಿವಿಧ ಎಕ್ಸೋಟಿಕ್ (ಇಥರಣಛಿ) ಜಾತಿಗಳ ಕಟ್ ಫ್ಲವರ್ (ಅಣಣ ಈಟಠಜಡಿ) ಜೋಡಣೆ, ವಿವಿಧ ಎಕ್ಸೋಟಿಕ್ (ಇಥರಣಛಿ) ಜಾತಿಗಳ ತರಕಾರಿಗಳ ಜೋಡಣೆ ಹಾಗೂ ವಿವಿಧ ಕಾಲಾಕೃತಿಯಲ್ಲಿ ವಸ್ತುಗಳ ಪ್ರದರ್ಶನವನ್ನು ಮಾಡಲಾಗುತ್ತೆ ಎಂದು ಹೇಳಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ಮಾತನಾಡಿ, ಜಿಲ್ಲಾ ಮಟ್ಟದ ಮೇಳದಲ್ಲಿ ಕೃಷಿ ಇಲಾಖೆಯ ಮಳಿಗೆಯಲ್ಲಿ ನೂತನ ತಂತ್ರಜ್ಞಾನಗಳು, ಇಲಾಖಾ ಯೋಜನೆಗಳು, ಕಾರ್ಯಕ್ರಮಗಳ ಕುರಿತಾದ ಪ್ರದರ್ಶನ ಮಾದರಿಗಳು, ಮಾಹಿತಿ ಫಲಕಗಳು, ಕರ ಪತ್ರಗಳು ಮುಂತಾದ ವಸ್ತುಗಳನ್ನು ಈಡಲಾಗುವುದು ಎಂದು ಹೇಳಿದರು.
ಪರ್ಯಾಯ ಇಂಧನ ಮೂಲವಾಗಿ ಸೌರಶಕ್ತಿ, ಬಳಕೆಯ ಬಗ್ಗೆ ಮಾಹಿತಿ ನೀಡುವ ಪ್ರಾತ್ಯಕ್ಷಿಕೆ ಸಲಕರಣೆಗಳನ್ನು ಇಡಲಾಗುವುದು, ನೂತನವಾಗಿ ಪ್ರಾರಂಭವಾದ ಸ್ಮಾರ್ಟ ಆ್ಯಪ್‌ಗಳು ಮತ್ತು ಉದ್ಯಮಿಗಳಿಗೆ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡಲಾಗಿದೆ. ಯಾಂತ್ರೀಕರಣ ಮತ್ತು ನೀರಾವರಿ ಸೌಲಭ್ಯಗಳ ಕುರಿತಂತೆ ಮಾದರಿ ಪ್ರಾತ್ಯಕ್ಷಿಕೆ ಹಾಗೂ ಯಂತ್ರೋಪಕರಣಗಳನ್ನು ಪ್ರದರ್ಶಿಸಲಾಗುವುದು ಮತ್ತು ಮಳಿಗೆಗಳಲ್ಲಿ ನೆಲಮೂಲ ತಳಿಗಳ ಬೀಜ ಪ್ರದರ್ಶನ, ಸಿರಿಧಾನ್ಯಗಳು ಮತ್ತು ಅವುಗಳ ಉತ್ಪನ್ನಗಳು, ಸಾವಯವ ಆಹಾರ ಸಾಮಗ್ರಿಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಈಡಲಾಗುವುದು ಎಂದು ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 