ನೂತನ ಅಧ್ಯಕ್ಷರಿಗೆ ಸಂಪೂರ್ಣ ಸಹಕಾರ ನೀಡುವೆ-ಗುಡ್ಲಾನೂರ್
ಕೊಪ್ಪಳ 10: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಕೊಪ್ಪಳ ಜಿಲ್ಲಾ ಘಟಕಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಹನುಮಂತ ಹಳ್ಳಿಕೇರಿ ಅವರಿಗೆ ಸಂಘಟನೆ ಬೆಳೆಸುವ ಮತ್ತು ಸಂಘದ ಅಭಿವೃದ್ಧಿ ಕೆಲಸದಲ್ಲಿ ಸಂಪೂರ್ಣ ಸಹಕಾರ ನೀಡುವದಾಗಿ ಸಂಘದ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಬಸವರಾಜ ಗುಡ್ಲಾನೂರ್ ಹೇಳಿದರು.
ಅವರು ಶುಕ್ರವಾರ ಬೆಳಿಗ್ಗೆ ಇಲ್ಲಿನ ಪತ್ರಿಕಾ ಭವನ್ ದಲ್ಲಿ ಜರುಗಿದ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಹನುಮಂತ ಹಳ್ಳಿಕೇರಿ ಯವರಿಗೆ ಅಧಿಕಾರ ಹಸ್ತಾಂತರಿಸಿ ಅವರನ್ನು ಶುಭ ಕೋರಿದ ಬಳಿಕ ಏರಿ್ಡಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಿ ಸಂಘದ ಹಿರಿಯರ ಮಾರ್ಗದರ್ಶನದಲ್ಲಿ ಎಲ್ಲಾ ಪದಾಧಿಕಾರಿಗಳ ಸಹಕಾರದೊಂದಿಗೆ ಸಂಘ ಬೆಳೆಸುವಂತಹ ಕೆಲಸ ಮಾಡಬೇಕು ಸದಸ್ಯರ ಸಮಸ್ಯೆಗಳಿಗೆ ನೇರ ಸ್ಪಂದನೆ ನೀಡಿ ಶ್ರಮಿಸಬೇಕೆಂದು ನೂತನ ಅಧ್ಯಕ್ಷರಿಗೆ ನಿಕಟ್ ಪೂರ್ವ ಅಧ್ಯಕ್ಷರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಎಂ ಸಾಧಿಕಅಲಿ ವಿಶೇಷ ಆಹ್ವಾನಿತ ರಾಜ್ಯ ಸದಸ್ಯರಾದ ಹೆಚ್‌ಎಸ್ ಹರೀಶ್ ರಾಷ್ಟ್ರೀಯ ಮಂಡಳಿ ಸದಸ್ಯರಾದ ಜಿಎಸ್ ಗೋನಾಳ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ ನಾಗರಾಜ್ ಪತ್ರಿಕಾ ಭವನ್ ಕಟ್ಟಡ ಸಮಿತಿಯ ಅಧ್ಯಕ್ಷ ಎನ್‌ಎಂ ದೊಡ್ಡಮನಿ ಜಿಲ್ಲಾ ಉಪಾಧ್ಯಕ್ಷರಾದ ವೆಂಕಟೇಶ್ ಕುಲಕರ್ಣಿ ಆರ್ ಬಿ ಪಾಟೀಲ್ ಜಿಲ್ಲಾ ಕಾರ್ಯದರ್ಶಿಗಳಾದ ವೀರಣ್ಣ ಕಳ್ಳಿಮನಿ ಮಂಜುನಾಥ್ ಅಂಗಡಿ ಸೇರಿದಂತೆ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರೆಲ್ಲರೂ ಮತ್ತು ವಿವಿಧ ತಾಲೂಕ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು,