ಜಿಲ್ಲಾಡಳಿತ ವತಿಯಿಂದ ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿಧರ್ಾರ

ಲೋಕದರ್ಶನ ವರದಿ

ವಿಜಯಪುರ 13:ಜಿಲ್ಲಾಡಳಿತದ ವತಿಯಿಂದ ಇದೇ ಜನೇವರಿ 26ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಪ್ರತಿವರ್ಷದಂತೆ ಈ ವರ್ಷವೂ ಸಹ ರಾಷ್ಟ್ರೀಯ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಅಂದು ಬೆಳಿಗ್ಗೆ  8 ಗಂಟೆಗೆ ಎಲ್ಲ ಸಕರ್ಾರಿ ಕಚೇರಿ, ಶಾಲಾ-ಕಾಲೇಜ್ಗಳಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ನಂತರ ಬೆಳಿಗ್ಗೆ 9-00 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. 

ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸಚಿವರಿಂದ ಧ್ವಜಾರೋಹಣ ತರುವಾಯ, ಧ್ವಜ ವಂದನೆ, ಕವಾಯತು, ಗಣರಾಜ್ಯೋತ್ಸವ ಸಂದೇಶ, ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಈ ಕಾರ್ಯಕ್ರಮಕ್ಕೆ ಆಯಾ ಇಲಾಖಾ ಅಧಿಕಾರಿಗಳು ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದರು.

ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದ ಅಲಂಕಾರ,ಆಸನ ವ್ಯವಸ್ಥೆ ಹಾಗೂ ವಿಜಯಪುರ ನಗರದ ವಿವಿಧ ಐತಿಹಾಸಿಕ ಸ್ಮಾರಕಗಳು, ವಿವಿಧ ವೃತ್ತಗಳನ್ನು ದೀಪಾಲಂಕಾರಗೊಳಿಸುವುದು, ರಸ್ತೆಗಳ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ  ತೋಟಗಾರಿಕೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಪ್ರವಾಸೋದ್ಯಮ, ಹಾಗೂ ಇತರೆ  ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಸೇರಿದಂತೆ ಜಿಲ್ಲಾ ಮಟ್ಟದ  ವಿವಿಧ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಇತರರು ಭಾಗವಹಿಸಿದ್ದರು.