ಲೋಕದರ್ಶನ ವರದಿ
ವಿಜಯಪುರ, 10 : ಜಿಲ್ಲಾಡಳಿತದ ವತಿಯಿಂದ ಮಹಾಯೋಗಿ ವೇಮನ, ಅಂಬಿಗರ ಚೌಡಯ್ಯ ಹಾಗೂ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಜನವರಿ 19ರಂದು ಮಹಾಯೋಗಿ ವೇಮನ ಜಯಂತಿ, ಜ.21 ರಂದು ಅಂಬಿಗರ ಚೌಢಯ್ಯ ಜಯಂತಿ, ಹಾಗೂ ಜ.23 ರಂದು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಜ.19ರಂದು ಮಹಾಯೋಗಿ ವೇಮನ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 9-30ಕ್ಕೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಹೇಮರಡ್ಡಿ ಮಲ್ಲಮ್ಮ ಮಂಗಲ ಕಾಯರ್ಾಲಯದವರಗೆ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಹಾಗೂ 11 ಗಂಟೆಗೆ ವೇದಿಕೆ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಜನವರಿ 21 ರಂದು ಅಂಬಿಗರ ಚೌಡಯ್ಯ ಜಯಂತಿ ದಿನದಂದು ಬೆಳಿಗ್ಗೆ 10-30ಕ್ಕೆ ಅಂಬೇಡ್ಕರ್ ವೃತ್ತದಿಂದ ಶ್ರೀ ಸಿದ್ದೇಶ್ವರ ಕಲಾಭವನದವರೆಗೆ ಮೆರವಣಿಗೆ ಹಾಗೂ 11-30ಕ್ಕೆ ಶ್ರೀ ಸಿದ್ದೇಶ್ವರ ಕಲಾಭವನದಲ್ಲಿ ವೇದಿಕೆ ಕಾರ್ಯಕ್ರಮ, ಉಪನ್ಯಾಸ, ವಚನಗಾಯನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಯಿತು. ಜ.23 ರಂದು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಅಂಗವಾಗಿ ಬೆಳಿಗ್ಗೆ 9-30ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಶ್ರೀ ಸಿದ್ದೇಶ್ವರ ಕಲಾಭವನದವರೆಗೆ ಮೆರವಣಿಗೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಹಾಗೂ 11-00 ಗಂಟೆಗೆ ಶ್ರೀ ಸಿದ್ದೇಶ್ವರ ಕಲಾಭವನದಲ್ಲಿ ವೇದಿಕೆ ಕಾರ್ಯಕ್ರಮ, ಉಪನ್ಯಾಸ, ವಚನಗಾಯನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಯಿತು.
ಜಯಂತಿ ಕಾರ್ಯಕ್ರಮಗಳಲ್ಲಿ ಆಯಾ ದಿನದಂದು ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸುವುದು, ಮೆರವಣಿಗೆ ಸಾಗುವ ಮಾರ್ಗ ಮಧ್ಯೆ ಸ್ವಚ್ಛತೆ, ಕುಡಿಯುವ ನೀರು, ವಿವಿಧ ವೃತ್ತಗಳ ಅಲಂಕಾರ, ವೇದಿಕೆ ಅಲಂಕಾರ, ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕಿ ವಿದ್ಯಾವತಿ ಎಚ್.ಬಿ., ಸಮಾಜದ ಮುಖಂಡರುಗಳಾದ ಸಾಹೇಬಗೌಡ ಬಿರಾದಾರ, ಶಿವಾನಂದ ಭುಯ್ಯಾರ, ಭರತ ಕೋಳಿ, ವಿದ್ಯಾವತಿ ಅಂಕಲಗಿ, ವಿ.ಜಿ.ನಾಗಠಾಣ, ಶರಣು ಸಬರದ, ಸೋಮನಗೌಡ ಕಲ್ಲೂರ, ಎಚ್.ಆರ್. ಮಾಚಪ್ಪನವರ, ಡಾ.ಕರಿಗೌಡರ, ಡಾ.ಕಂಠೀರವ ಕುಲ್ಲೊಳ್ಳಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.