ಬಾಗಲಕೋಟೆ 20: ಜಿಲ್ಲಾಡಳಿತದ ವತಿಯಿಂದ ನವೆಂಬರ 26 ರಂದು ಜರುಗಲಿರುವ ಭಕ್ತ ಕನಕದಾಸರ ಜಯಂತಿಯನ್ನು ವಿಜೃಂಭಣೆ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಎಚ್.ಜಯ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಈ ಕುರಿತು ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂದು ಬೆಳಿಗ್ಗೆ 9ಕ್ಕೆ ಜಿಲ್ಲಾಡಳಿತ ಭವನದಿಂದ ಕಲಾಭವನದ ವರೆಗೆ ಕನಕದಾಸರ ಭಾವಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗುತ್ತಿದ್ದು, ವಿವಿಧ ಜಾನಪದ ಕಲಾತಂಡಗಳನ್ನು ಆಹ್ವಾನಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕರಿಗೆ ತಿಳಿಸಿದರು. ವೇದಿಕೆ ಕಾರ್ಯಕ್ರಮವನ್ನು ಕಲಾಭವನದಲ್ಲಿ ಮಾಡಲು ನಿರ್ಧರಿಸಲಾಗಿದೆ ಎಂದರು.
ಮೆರವಣಿಗೆ ಹಾಗೂ ವೇದಿಕೆ ಸ್ಥಳವನ್ನು ಸ್ವಚ್ಛಗೊಳಿಸುವದರ ಜೊತೆಗೆ ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ ಕಾರ್ಯಕ್ರಮಗಳಲ್ಲಿ ಆಸನಗಳ ವ್ಯವಸ್ಥೆ ಮಾಡಬೇಕೆಂದರು. ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೋಲಿಸ್ ಇಲಾಖೆಗೆ ತಿಳಿಸಲಾಯಿತು. ಭಕ್ತ ಕನಕದಾಸರ ಜೀವನ ಚರಿತ್ರೆ ಬಗ್ಗೆ ಉಪನ್ಯಾಸ ನೀಡಲು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪ್ರಥಮ ದಜರ್ೆ ಕಾಲೇಜಿನ ಉಪನ್ಯಾಸಕ ಡಾ.ಎನ್.ಎ.ಕಟ್ಟೆಚಿಕ್ಕಣ್ಣ ಅವರನ್ನು ಉಪನ್ಯಾಸಕರಾಗಿ ಆಹ್ವಾನಿಸುವಂತೆ ಸಭೆಯಲ್ಲಿ ತಿಮರ್ಾನಿಸಲಾಯಿತು. ಖಾಸಗಿ ಹಾಗೂ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಪ್ರತಿ ವರ್ಷ ಕನಕದಾಸ ಜಯಂತಿ ದಿನದಂದು ಕನಕಸಿರಿ ಪ್ರಶಸ್ತಿ ನೀಡುವ ಸಲುವಾಗಿ ಸಮಿತಿಯನ್ನು ರಚಿಸಲು ಸಭೆಯಲ್ಲಿ ತೀಮರ್ಾನಿಸಲಾಯಿತು. ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಪ್ಪದೇ ಹಾಜರಿರಲು ಸೂಚಿಸಿದ ಅಪರ ಜಿಲ್ಲಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯ ಭಾಂದವರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದರು.
ಸಭೆಯಲ್ಲಿ ಕನ್ನಡ ಅಭಿವೃದ್ದಿ ಪ್ರಾಧಿಕಾರದ ನಿದರ್ೇಶಕ ಮಹಾಂತೇಶ ಹಟ್ಟಿ, ಪ್ರೊಬೇಷನರಿ ಉಪವಿಭಾಗಾಧಿಕಾರಿ ದೊಡ್ಡಗೌಡರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಮುಖಂಡರಾದ ಡಿ.ವಿ.ಸಿದ್ದಾಪೂರ, ಎಚ್.ಬಿ.ಗೊರವರ, ಶಶಿಕಾಂತ ಉದಗಟ್ಟಿ, ಹನಮಂತ ಎನ್ನಿ, ರಾಮಣ್ಣ ಕುರಿ, ಹನಮಂತ ರಾಕುಂಪಿ, ಮಲ್ಲು ಬಡಿಗೇರ, ಶ್ರೀಮತಿ ರಾಜೂರ, ಹೇಮಾ ಕುರಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕಿ ಶಶಿಕಲಾ ಹುಡೇದ ಸ್ವಾಗತಿಸಿದರು ಕಂದಾಯ ಇಲಾಖೆಯ ಶಿರಸ್ತೆದಾರ ಎಂ.ಬಿ.ಗುಡೂರ ವಂದಿಸಿದರು.