ರೈತರು, ಕೃಷಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿ.ರಾಮ್.ಜಿ ಈ ಯೋಜನೆ ಜಾರಿಗೆ
G.Ram.Ji implemented this scheme to benefit farmers and agricultural workers
ಗದಗ 12: ಮೋದಿ ನೇತೃತ್ವದ ಕೇಂದ್ರ ಸರಕಾರ ಲೋಕಸಭೆಯಲ್ಲಿ ಮಂಡಿಸಿ ನಂತರ ರಾಜ್ಯ ಸಭೆಯಲ್ಲಿ ಮಂಡಿಸಿ ಈ ಹಿಂದೆ ಇದ್ದ ಮನರೇಗಾ ಯೋಜನೆಯ ಲೋಪದೋಷ ಸರಿಪಡಿಸಿ ರೈತರಿಗೆ, ಕೃಷಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಈ ಯೋಜನೆ ಜಾರಿಗೆ ತಂದಿದ್ದು, ಜಿ.ರಾಮ್.ಜಿ ಕಾಯ್ದೆ ಜಾರಿಗೋಳಿಸಿದ್ದು ಸ್ವಾಗತಾರ್ಹ ಎಂದು ಮಾಜಿ ಸಚಿವ, ಹಾಲಿ ಶಾಸಕ ಸಿ. ಸಿ ಪಾಟೀಲ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಮನರೇಗಾ ಯೋಜನೆಯ ಹಣ ವಿಳಂಬವಾಗುತ್ತಿತ್ತು. ಕಾಯ್ದೆ ತಿದ್ದುಪಡಿ ಆದ ನಂತರ ವಿಳಂಬವಾಗುವುದಿಲ್ಲ. ಸಿದ್ದರಾಮಯ್ಯ ಈ ಕಾಯ್ದೆಯನ್ನು ವಿರೋಧ ಮಾಡುತ್ತಾರೆ. ತಮ್ಮ ಸರ್ಕಾರದ ಹುಳುಕು ಹೊರಬರುತ್ತದೆ ಎನ್ನುವ ಭಯ ಅವರಲ್ಲಿ ಕಾಡುತ್ತಿದೆ. ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿ, ಅನುಮೊದನೆ ಪಡೆದು, ರಾಜ್ಯ ಸಭೆಯಲ್ಲಿಯೂ ಮಂಡಿಸಿ ಅನುಮೊದನೆ ಪಡೆದು ತಿದ್ದುಪಡಿ ಮಾಡಲಾಗಿದೆ ಎಂದರು.
ಇದೇ ವೇಳೆ ವಿಧಾನ ಪರಿಯತ್ ಸದಸ್ಯ ಎಸ್. ವ್ಹಿ ಸಂಕನೂರ ಮಾತನಾಡಿ, ಮನರೇಗಾ ಯೋಜನೆಯ ಲೋಪದೋಷ ಗುರುತಿಸಿ ವಿಕಸಿತ ಭಾರತ ಕಾಯ್ದೆ ಜಾರಿಗೆ ತರಲಾಗಿದೆ. ಮನರೇಗಾ ದಿಂದ ಭ್ರಷ್ಟಾಚಾರ ಮಾಡಲು ಅನೂಕೂಲವಾಗುತ್ತಿತ್ತು. ರೈತರು ಬಿತ್ತನೆ ಮಾಡುವ ಸಮಯದಲ್ಲಿ ಮನರೇಗಾ ಕಾರ್ಯ ಆರಂಭವಾಗುತ್ತಿತ್ತು. ನೂತನ ಕಾಯ್ದೆಯಿಂದ 60 ದಿನಗಳ ಕಾಲ ಕಡ್ಡಾಯವಾಗಿ ರಜೆ ನೀಡಬೇಕು ಅಂತ ವಿವರಿಸಿದರು.
ಪಂಚಾಯತ್ ರಾಜ್ ವ್ಯವಸ್ಥೆಯ ಅಧಿಕಾರ ಮೊಟಕುಗೊಳಿಸಲಾಗುತ್ತದೆ ಅಂತ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಇದು ಶುದ್ದ ಸುಳ್ಳು. ನೀರಿನ ಸುರಕ್ಷತೆ ಕಾಮಗಾರಿ, ಗ್ರಾಮಿಣ ಮೂಲ ಸೌಕರ್ಯ ರೂಪಿಸುವುದು, ಜೀವನೊಪಾಯಕ್ಕೆ ಬೇಕಾಗಿರುವ ವ್ಯವಸ್ಥೆ ಕಲ್ಪಿಸುವುದು, ಹವಾಮಾನ ವೈಪರಿತ್ಯದಿಂದ ಆಗುವ ಅನಾಹುತ ಸರಿಪಡಿಸುವುದನ್ನು ನೂತನ ಕಾಯ್ದೆಯಲ್ಲಿ ಜಾರಿಗೆ ತರಲಾಗಿದೆ ಎಂದರು.
1980 ರಲ್ಲಿ ಎನ್. ಆರ್. ಇ. ಜಿ ಎಂದು ಈ ಯೋಜನೆಯ ಹೆಸರಿತ್ತು. ನಂತರ ಮನರೇಗಾ ಅಂತ ಹೆಸರು ಬದಲಾಯಿಸಲಾಯಿತು. ಕಾಂಗ್ರೆಸ್ ತಪ್ಪು ಸಂದೇಶವನ್ನು ನೀಡುತ್ತಿದೆ. ಗಾಂಧಿಜಿಯವರ ರಾಮರಾಜ್ಯ ಕನಸು ನನಸು ಮಾಡಲು ನರೇಂದ್ರ ಮೋದಿ ಹೆಸರು ಬದಲಾವಣೆ ಮಾಡಿರುವುದು ಸ್ವಾಗತಾರ್ಹ ಎಂದರು.
ಭಾರತೀಯ ಜನತಾ ಪಕ್ಷದ ವತಿಯಿಂದ ಜಿಲ್ಲಾ ಸಮ್ಮೇಳನ, ತಾಲ್ಲೂಕ ಮಟ್ಟ, ಗ್ರಾಮ ಮಟ್ಟದ ಸಭೆ ನಡೆಸಿ ಜಿ.ರಾಮ್.ಜಿ ಕಾಯ್ದೆ ಕುರಿತು ಜನರಿಗೆ ಹಾಗೂ ಕೃಷಿಕರಿಗೆ ಮನವರಿಕೆ ಮಾಡಿಕೊಡಲಾಗುವುದು. ಸಿ. ಸಿ ಪಾಟೀಲ ಮಾಜಿ ಸಚಿವ, ಹಾಲಿ ಶಾಸಕ ನರಗುಂದ ಮತಕ್ಷೇತ್ರ ಈ ವೇಳೆ ಭಾರತೀಯ ಜನತಾ ಪಕ್ಷದ ಗದಗ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಮಾಜಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ನಿರ್ಮಲಾ ಕೊಳ್ಳಿ, ಎಂ. ಎಂ ಹಿರೇಮಠ, ಎಂ. ಎಸ್. ಕರಿಗೌಡ್ರ, ರವಿ ದಂಡಿನ್, ಲಿಂಗರಾಜಗೌಡ ಪಾಟೀಲ, ದತ್ತಣ್ಣ ಜೋಶಿ, ರಮೇಶ ಸಜ್ಜಗಾರ, ಸಿದ್ದು ಪಲ್ಲೇದ, ಉಡುಪಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 