ಜಿ. ಹೆಚ್. ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ
ಹಾವೇರಿ02: ನಗರದ ಕೆ. ಎಲ್. ಇ. ಸಂಸ್ಥೆಯ ಜಿ. ಹೆಚ್. ಕಾಲೇಜಿನಲ್ಲಿ ಈ ರಾಷ್ಟ್ರ ಕಂಡ ಅದ್ಭುತ ಮತ್ತು ಅಸಾಮಾನ್ಯ ಮೇರು ವ್ಯಕ್ತಿತ್ವದ ರಾಜಕಾರಣಿ, ಉಕ್ಕಿನ ಮನುಷ್ಯ ಸದರ್ಾರ ವಲ್ಲಭಬಾಯಿ ಪಟೇಲರ ಜನ್ಮದಿನದ ಅಂಗವಾಗಿ "ರಾಷ್ಟ್ರೀಯ ಏಕತಾ ದಿನಾಚರಣೆ"ಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ. ಎಮ್. ಎಸ್. ಯರಗೊಪ್ಪ ವಹಿಸಿ, ಪಾಲ್ಗೊಂಡಿದ್ದ ನೂರಾರು ವಿದ್ಯಾಥರ್ಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಅನಂತರ ಜರುಗಿದ 'ಆಡಳಿತದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅರಿವು ಸಪ್ತಾಹ-2018' ನ್ನು ಆಚರಿಸಲಾಯಿತು. ಮಾತನಾಡಿದ ಪ್ರಾಚಾರ್ಯ ಡಾ. ಎಮ್. ಎಸ್. ಯರಗೊಪ್ಪ ಇಂದು ಎಲ್ಲೆಡೆ ನಡೆಯುತ್ತಿರುವ ಕೆಲವು ಕ್ಷೇತ್ರಗಳಲ್ಲಿನ ಭ್ರಷ್ಟಾಚಾರವನ್ನು ನಿಯಂತ್ರಿಸಲು ಪ್ರತಿಯೊಬ್ಬ ನಾಗರಿಕನೂ ಬಹು ಜಾಗರೂಕನಾಗಿ ಬದಲಾವಣೆ ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ವಿದ್ಯಾಥರ್ಿಗಳು ನಿಷ್ಠೆ ಮತ್ತು ಪ್ರಾಮಾಣಿಕತೆ ಮೆರೆಯಬೇಕಿದೆ.
ಸಲ್ಲುವ ತೆರದಲ್ಲಿ ಕಾರ್ಯ ಮಾಡುವ ಮತ್ತು ಯೋಚಿಸುವ ಗುಣವಂತಿಕೆಯನ್ನು ಮೆರೆಯಬೇಕಿದೆ. ಹೃದಯವಂತಿಕೆ ಇಲ್ಲದ ಶ್ರೀಮಂತಿಕೆ ವ್ಯರ್ಥ. ಸ್ವಾರ್ಥ ಮತ್ತು ಸಂಕುಚಿತತೆ ಬಿಟ್ಟು ಪ್ರತಿ ಹಂತದ ನಿಯತ್ತಿನ ಕಾರ್ಯಕ್ಕೆ ಬದ್ದತೆಯಿಂದಿರುವ ಕಾರ್ಯ ಮಾಡಬೇಕಿದೆ ಎಂದರು.
ಪ. ಪೂ. ಪ್ರಾಚಾರ್ಯ ಪ್ರೊ. ಜೆ. ಆರ್. ಶಿಂಧೆ, ಎನ್. ಸಿ. ಸಿ., ಎನ್. ಎಸ್. ಎಸ್., ರೆಡ್ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್, ಇಕೋ ಕ್ಲಬ್ ಘಟಕದ ಅಧಿಕಾರಿಗಳು, ಕೆಡೆಟ್ಗಳು, ಬೊಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 