ಧಾರವಾಡ: ಐಎಎಸ್ ಅಧಿಕಾರಿ ಡಾ. ಬಿ.ಸಿ.ಸತೀಶ ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಐ.ಎ.ಎಸ್.ಅಧಿಕಾರಿ ಸ್ನೇಹಲ್ ಆರ್ ಅವರು ಅಧಿಕಾರ ಹಸ್ತಾಂತರಿಸಿದರು.
ಮೂಲತಃ ಶಿವಮೊಗ್ಗ ಜಿಲ್ಲೆಯವರಾದ ಡಾ.ಬಿ.ಸಿ.ಸತೀಶ ಅವರು ಈ ಹಿಂದೆ ಧಾರವಾಡ ಜಿಲ್ಲೆಯಲ್ಲಿ ಹೆಸ್ಕಾಂ ಪ್ರಧಾನ (ಆಡಳಿತ) ವ್ಯವಸ್ಥಾಪಕರಾಗಿ 2012 ರಿಂದ 2014ರವರೆಗೆ ಮತ್ತು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ 2014 ರಿಂದ 2016ರವರೆಗೆ ಸೇವೆ ಸಲ್ಲಿಸಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯತ ಸಿ.ಇ.ಓ ಆಗಿ ಕರ್ತವ್ಯಕ್ಕೆ ಹಾಜರಾಗುವ ಪೂರ್ವದಲ್ಲಿ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಗಣಿ ವಿಭಾಗದ ಉಪ ಕಾರ್ಯದಶರ್ಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳಾಗಿ ಡಾ.ಬಿ.ಸಿ.ಸತೀಶ ಅವರು ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದಶರ್ಿ ಎಸ್.ಜಿ.ಕೊರವರ ಹಾಗೂ ಇತರ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.