ಜಿ.ಎ. ಪ್ರೌಢಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
GA High School Division Annual Sports Meet kicks off
ಬೆಳಗಾವಿ : ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಜಿ.ಎ. ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಲಿಂಗರಾಜ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಸಿ. ರಾಮರಾವ್ ಶುಕ್ರವಾರ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡೆ ಎನ್ನುವುದು ವಿದ್ಯಾರ್ಥಿಗಳ ಜೀವನದ ಅವಿಭಾಜ್ಯ ಅಂಗವಾಗಿದೆ. ಪ್ರತಿಯೊಬ್ಬರು ಉತ್ಸಾಹದಿಂದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಕ್ರಿಯಾಶೀಲರಾಗಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಉಪಪ್ರಾಚಾರ್ಯ ಸಿ.ಪಿ.ದೇವರುಷಿ ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವುದು ಅತ್ಯಂತ ಮುಖ್ಯ. ಇದರಲ್ಲಿ ಪ್ರಥಮ, ದ್ವಿತೀಯ, ತೃತೀಯ ಬರಬಹುದು. ಯಾರು ನಿರಾಶೆ ಪಡಬೇಕಾಗಿಲ್ಲ. ಒಟ್ಟಾರೆಯಾಗಿ ಭಾಗವಹಿಸುವಿಕೆ ಎನ್ನುವುದು ಅತ್ಯಂತ ಮುಖ್ಯವಾಗಿದೆ ಎಂದು ಪ್ರತಿಪಾದಿಸಿದರು. ಕ್ರೀಡೆಗಳಲ್ಲಿ ಪರಿಶ್ರಮ ಮತ್ತು ತಾಳ್ಮೆ ಅತ್ಯಂತ ಪ್ರಮುಖವಾಗಿರುತ್ತದೆ. ಪರಿಶ್ರಮದಿಂದ ಪ್ರಯತ್ನಿಸಿದರೆ ಗೆಲುವು ಸುಲಭ ಸಾಧ್ಯವಾಗುತ್ತದೆ. ಜೊತೆಗೆ ತಾಳ್ಮೆಯೂ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.
ಕ್ರೀಡಾ ವಿಭಾಗದ ಮುಖ್ಯಸ್ಥ ಎಚ್.ಜಿ.ವೀರಗಂಟಿ ಪಥಸಂಚಲನ ಹಾಗೂ ವಿವಿಧ ಕ್ರೀಡೆಗಳನ್ನು ಅದ್ದೂರಿಯಾಗಿ ನಡೆಸಿಕೊಟ್ಟರು. ಶ್ರೀನಿಧಿ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಎಸ್.ಎಸ್.ಹಲವಾಯಿ ಪ್ರಾಸ್ತಾವಿಕ ಹಾಗೂ ಸ್ವಾಗತಿಸಿದರು. ಎಸ್.ಜೆ.ಏಳುಕೋಟಿ ಅತಿಥಿಗಳ ಪರಿಚಯ ಮಾಡಿದರು. ಗೌರಿ ಪೂಜಾರಿ ಮತ್ತು ಸಂಗಡಿಗರು ಕ್ರೀಡಾ ಜ್ಯೋತಿ ಆರೋಹಣ ಮಾಡಿದರು. ಸೋನಾಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಎ.ಜಿ.ಬಾಯನ್ನವರ ವಂದಿಸಿದರು. ಸಿ.ಎಂ.ಪಾಗದ ಮತ್ತು ಪಿ.ಆರ್. ಸುಣಗಾರ ನಿರೂಪಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 